ಗ್ಯಾಸ್ ಅಭಾವ ತಡೆಗೆ ಕೇಂದ್ರ ಸರ್ಕಾರದ ‘ಮಾಸ್ಟರ್ ಪ್ಲಾನ್’: ಹೊಸ ಮಾರ್ಗಸೂಚಿ

ದೆಹಲಿ: ದೇಶದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯನ್ನು ತಡೆಯಲು ಕೇಂದ್ರ ಸರ್ಕಾರವು ಸಮರ ಕಾಲದ ಆಧಾರದ ಮೇಲೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಒಬ್ಬ ಗ್ರಾಹಕರು ಒಂದು ಸಿಲಿಂಡರ್ ಪಡೆದ ನಂತರ ಮತ್ತೊಂದು ಸಿಲಿಂಡರ್ ಬುಕ್ ಮಾಡಲು ಇದ್ದ ಕನಿಷ್ಠ ಅವಧಿಯನ್ನು ಈಗ 25 ದಿನಗಳಿಗೆ ಹೆಚ್ಚಿಸಲಾಗಿದೆ. ಅನಗತ್ಯವಾಗಿ ಸಿಲಿಂಡರ್ ಸಂಗ್ರಹಿಸಿಡುವುದನ್ನು (Hoarding) ತಡೆಯುವುದು ಇದರ ಮುಖ್ಯ ಉದ್ದೇಶ.

ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗಿಂತ ಗೃಹಬಳಕೆ (Domestic) ಗ್ರಾಹಕರಿಗೆ ನಿರಂತರ ಪೂರೈಕೆ ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ. ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ ಮತ್ತು ನಾರ್ವೆಯಂತಹ ದೇಶಗಳಿಂದ ಎಲ್‌ಪಿಜಿ ಆಮದು ಮಾಡಿಕೊಳ್ಳಲು ಸರ್ಕಾರ ಮಾತುಕತೆ ನಡೆಸಿದೆ. ಇದು ಪೂರೈಕೆಯಲ್ಲಿ ಸ್ಥಿರತೆಯನ್ನು ತರಲಿದೆ.

Advertisement

ಇದನ್ನೂ ಓದಿ: LPG ಬೆಲೆ ಏರಿಕೆ ಶಾಕ್: ಇಂದಿನಿಂದಲೇ ಹೊಸ ದರ ಜಾರಿ!

ದೇಶೀಯ ತೈಲ ಸಂಸ್ಕರಣಾಗಾರಗಳಿಗೆ (Refineries) ಉತ್ಪಾದನೆಯನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸಲು ಸೂಚಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು