ಮೊದಲ ಬಾರಿಗೆ ಭಾನುವಾರದಂದು ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್

Budget

ನವದೆಹಲಿ: ಕೇಂದ್ರ ಬಜೆಟನ್ನು ಫೆ.1ರಿಂದ ಮಂಡಿಸುವುದು ಕಳೆದ ಕೆಲವು ವರ್ಷಗಳಿಂದ ಪಾಲಿಸಿಕೊಂಡು ಬಂದ ಪರಿಪಾಠವಾಗಿದೆ. ಆದರೆ ಈ ಬಾರಿ ಫೆ.1 ಭಾನುವಾರ ಬಂದಿದ್ದು, ಹಾಗಾಗಿ ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾನುವಾರ ಬಜೆಟ್‌ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರು 2025-26ನೇ ಸಾಲಿನ ಬಜೆಟನ್ನು  ಫೆಬ್ರವರಿ 1 ಭಾನುವಾರದಂದ್ದು  ಮಂಡಿಸಲಿದ್ದಾರೆ.

ಬಜೆಟ್ ದಾಖಲೆಯ ಪೂರ್ವಗಾಮಿಯಾಗಿರುವ ಆರ್ಥಿಕ ಸಮೀಕ್ಷೆಯನ್ನು ಜನವರಿ 29ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ :  US : ವೆನೆಜುವೆಲಾ ತೈಲ ಭಾರತಕ್ಕೆ ಮಾರಲು ಸಿದ್ಧ : ಅಮೆರಿಕ

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಪ್ರಾರಂಭವಾಗಿ ಏಪ್ರಿಲ್ 2 ರವರೆಗೆ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇದಕ್ಕೆ ಅನುಮೋದನೆ ನೀಡಿದ್ದಾರೆ. ರಾಷ್ಟ್ರಪತಿಗಳು ಅಧಿವೇಶನದ ಮೊದಲ ದಿನ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಜೆಟ್ ಅಧಿವೇಶನದ ಮೊದಲ ಹಂತವು ಫೆಬ್ರವರಿ 13ರಂದು ಮುಕ್ತಾಯಗೊಳ್ಳಲಿದ್ದು, ಎರಡನೇ ಹಂತವು ಮಾರ್ಚ್ 9ರಂದು ಪ್ರಾರಂಭವಾಗಿ ಏಪ್ರಿಲ್ 2 ರವರೆಗೆ ಮುಂದುವರಿಯಲಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು