Breaking News

Politcal: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಸೋಮವಾರ ಪ್ರಕಟಿಸಿದ್ದಾರೆ. ಇತ್ತೀಚಿಗಷ್ಟೇ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಿಹಾರ ಬಿಜೆಪಿ ಶಾಸಕ ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಇಂದು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್ ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ ಮತ್ತು ಎಲ್ಲಾ ನಾಮಪತ್ರಗಳು ಮಾನ್ಯವಾಗಿವೆ ಎಂದು ಕೆ. ಲಕ್ಷ್ಮಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Breaking: ಅಶ್ಲೀಲ ವಿಡಿಯೋ ವೈರಲ್, ಡಿಜಿಪಿ ರಾಮಚಂದ್ರ ರಾವ್ ಅಮಾನತಿಗೆ ಸಿಎಂ ಆದೇಶ

Advertisement

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಬಿನ್‌ ಅವರ ಉಮೇದುವಾರಿಕೆಯನ್ನು ಸೂಚಿಸಿದವರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಒಬ್ಬರಾಗಿದ್ದಾರೆ. ಪಕ್ಷದ ಮುಖ್ಯಸ್ಥ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಹಲವಾರು ಹಿರಿಯ ಬಿಜೆಪಿ ನಾಯಕರು ನಬಿನ್ ಉಮೇದುವಾರಿಕೆಯನ್ನು ಬೆಂಬಲಿಸಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಇಂದು ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸಂಜೆ 4 ರಿಂದ 5 ರವರೆಗೆ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಸಂಜೆ 5 ರಿಂದ 6 ರವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಅವಕಾಶ ನೀಡಲಾಗಿತ್ತು. ಆದರೆ ನಬಿನ್‌ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ.20 ರಂದು ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಲಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು