ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಅಭಾವ ಉಂಟಾಗಲಿದೆ ಎಂಬ ವದಂತಿಗಳು ಹರಡುತ್ತಿರುವ ಬೆನ್ನಲ್ಲೇ, ಭಾರತದ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳಾದ ಬಿಪಿಸಿಎಲ್ (BPCL) ಮತ್ತು ಹೆಚ್ಪಿಸಿಎಲ್ (HPCL) ಬುಧವಾರ ಸಾರ್ವಜನಿಕರಿಗೆ ಭರವಸೆ ನೀಡಿವೆ. ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಕಂಪನಿಗಳು ಸ್ಪಷ್ಟಪಡಿಸಿವೆ.
ಕೆಲವು ಪ್ರದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಿದೆ ಎಂಬ ವದಂತಿ ಹರಡಲಾಗುತ್ತಿದೆ. ಇದು ಸಂಪೂರ್ಣವಾಗಿ ಆಧಾರರಹಿತವಾಗಿದ್ದು, ದೇಶದಲ್ಲಿ ಇಂಧನದ ಕೊರತೆಯಿಲ್ಲ ಎಂದು ಭಾರತ್ ಪೆಟ್ರೋಲಿಯಂ (BPCL) ತಿಳಿಸಿದೆ. ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್ ಮತ್ತು ಎಟಿಎಫ್ (ವಿಮಾನ ಇಂಧನ) ನಮ್ಮಲ್ಲಿ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದೆ. ರಾಷ್ಟ್ರೀಯ ಬೇಡಿಕೆಯನ್ನು ಪೂರೈಸಲು ಯಾವುದೇ ಅಡೆತಡೆಯಿಲ್ಲದೆ ನಿರಂತರ ಪೂರೈಕೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಬಂಗಾರ ಪ್ರಿಯರಿಗೆ ಬೆಲೆ ಏರಿಕೆ ಶಾಕ್! ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಜಂಪ್
ಜನರು ಭಯಭೀತರಾಗಿ (Panic Buying) ಬಂಕ್ಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅಥವಾ ಅನಗತ್ಯವಾಗಿ ಇಂಧನ ಸಂಗ್ರಹಿಸುವ ಅಗತ್ಯವಿಲ್ಲ. ಸಾಮಾನ್ಯ ಬಳಕೆಯಂತೆ ಇಂಧನ ಪಡೆದುಕೊಳ್ಳಿ ಎಂದು ಹಿಂದೂಸ್ತಾನ್ ಪೆಟ್ರೋಲಿಯಂ (HPCL) ಸಲಹೆ ನೀಡಿದೆ. ಕೇವಲ ಪೆಟ್ರೋಲ್ ಮಾತ್ರವಲ್ಲದೆ, ಅಡುಗೆ ಅನಿಲ (LPG) ಪೂರೈಕೆಯೂ ಸುಗಮವಾಗಿದೆ. ಯಾವುದೇ ರೀತಿಯ ಅಭಾವ ಸೃಷ್ಟಿಯಾಗಿಲ್ಲ.
ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

