ಅಯೋಧ್ಯೆ ಶ್ರೀ ರಾಮ ಮಂದಿರದ ಸುತ್ತಮುತ್ತ ಮಾಂಸಹಾರ ಸೇವನೆಗಿಲ್ಲ ಅವಕಾಶ

Ram Mandir

ಲಖನೌ: ಅಯೋಧ್ಯೆಯ ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ನಿಷೇಧಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದು, ಮಾಂಸಾಹಾರ ಪದಾರ್ಥಗಳನ್ನ ಪೂರೈಕೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ʻಪಂಚಕೋಶ ಪರಿಕ್ರಮʼದ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಅಯೋಧ್ಯೆಯ ಕೆಲವು ಹೋಟೆಲ್‌ಗಳು ಮತ್ತು ಹೋಂ ಸ್ಟೇಗಳು ಅತಿಥಿಗಳಿಗೆ ಮಾಂಸಾಹಾರ ಮತ್ತು ಮದ್ಯ ಪೂರೈಕೆ ಮಾಡುತ್ತಿವೆ ಎನ್ನುವ ದೊಡ್ಡ ಆರೋಪ ಕೇಳಿಬಂದಿದೆ. ಅಂತಹ ಚಟುವಟಿಕೆಗಳಿಂದ ದೂರ ಇರುವ ಹಾಗೆ ಅಧಿಕಾರಿಗಳು ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.

ಅಯೋಧ್ಯೆ ಮತ್ತು ಫೈಜಾಬಾದ್ ನ್ನು ಸಂಪರ್ಕಿಸುವ ಮಾರ್ಗದ 14 ಕಿಮೀನ ʻರಾಮ ಪಥʼದಲ್ಲಿ ಮದ್ಯ ಮತ್ತು ಮಾಂಸ ಮಾರಾಟ ನಿಷೇಧಿಸಲು ಅಯೋಧ್ಯೆ ಪುರಸಭೆ 2025 ಮೇ ಯಲ್ಲಿ ನಿರ್ಧಾರ ತೆಗೆದುಕೊಂಡಿತ್ತು. ಆದರೆ 9 ತಿಂಗಳೂ ಕಳೆದರೂ ಈ ಕಟ್ಟುನಿಟ್ಟಿನ ಕ್ರಮ ಜಾರಿಗೆ ಬಂದಿರಲಿಲ್ಲ. ಇದರಿಂದ ಸುಮಾರು 20ಕ್ಕೂ ಹೆಚ್ಚು ಮಳಿಗೆಗಳು ಈ ಪ್ರದೇಶದಲ್ಲಿ ಮದ್ಯ ಮಾರಾಟ ಮಾಡುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಂಟಿಯಾಗಿ ಸ್ಪರ್ಧಿಸುವ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ : ನಿಖಿಲ್ ಕುಮಾರಸ್ವಾಮಿ

ಈ ಕುರಿತು ಪ್ರತಿಕ್ರಿಯಿಸಿದ ಆಹಾರ ಇಲಾಖೆಯ ಸಹಾಯಕ ಆಯುಕ್ತ ಮಾಣಿಕ್‌ಚಂದ್ರ ಸಿಂಗ್, ಫೈಜಾಬಾದ್‌ನ ರೋಸ್ ಸೇರಿದಂತೆ ರಾಮ್ ಪಥ್‌ ನಾದ್ಯಂತದ ಮಾಂಸದ ಅಂಗಡಿಗಳನ್ನು ಸಿವಿಐಸಿ ಸಂಸ್ಥೆ ತೆಗೆದುಹಾಕಿದೆ. ನಿಷೇಧದ ಹೊರತಾಗಿಯೂ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಪ್ರವಾಸಿಗರಿಗೆ ಮಾಂಸಾಹಾರ ಪದಾರ್ಥಗಳನ್ನು ಪೂರೈಕೆ ಮಾಡೋದು ಮುಂದುವರಿದಿದೆ ಎಂಬ ದೂರು ಕೇಳಿಬರುತ್ತಿದ್ದು, ದೂರುಗಳ ನಂತರ, ಆನ್‌ಲೈನ್ನಲ್ಲಿ ಮಾಂಸಾಹಾರಿ ಆಹಾರ ವಿತರಣೆಗೂ ನಿಷೇಧ ಹೇರಲಾಗಿದೆ. ಎಲ್ಲ ಹೋಟೆಲ್‌, ಮಳಿಗೆಗಳಿಗೂ ಸೂಚನೆ ನೀಡಲಾಗಿದೆ. ಕ್ರಮ ಜಾರಿಯಾಗಿರುವ ಬಗ್ಗೆ ಮತ್ತೆ ಮೇಲ್ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು