ಪಾಕಿಸ್ತಾನದಲ್ಲಿ ಭೀಕರ ಅವಳಿ ಬಾಂಬ್ ಸ್ಫೋಟ!: ರಸ್ತೆಬದಿಯ ಐಇಡಿ ಬ್ಲಾಸ್ಟ್‌ಗೆ 7 ಮಂದಿ ಸಾವು

ಪೆಶಾವರ್: ಪಾಕಿಸ್ತಾನದ ತೀವ್ರ ಅಶಾಂತಿ ಪೀಡಿತ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಅವಳಿ ರಸ್ತೆಬದಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಹೊಣೆಯನ್ನು ಇದುವರೆಗೆ ಯಾವುದೇ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿಲ್ಲ.ಖೈಬರ್ ಪಖ್ತುಂಖ್ವಾದ ಬನ್ನು (Bannu) ಜಿಲ್ಲೆಯ ಮಾರ್ಕಾ ಬೆರಾ ಎಂಬ ಪ್ರದೇಶದಲ್ಲಿ ಈ ಭೀಕರ ದುರಂತ ಸಂಭವಿಸಿದೆ.

ಬನ್ನು ಜಿಲ್ಲಾ ಪೊಲೀಸ್ ಅಧಿಕಾರಿ (DPO) ಯಾಸಿರ್ ಅಫ್ರಿದಿ ನೀಡಿರುವ ಮಾಹಿತಿ ಪ್ರಕಾರ, ರಸ್ತೆಬದಿಯಲ್ಲಿ ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧನ (IED) ಮೊದಲ ಬಾರಿಗೆ ಸ್ಫೋಟಗೊಂಡಿದೆ. ಈ ವೇಳೆ ಆ ಮಾರ್ಗವಾಗಿ ಹಾಥಿ ಖೇಲ್ ಗ್ರಾಮದಿಂದ ಬನ್ನು ನಗರಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್ ಬಿಗಿಯಾಗಿ ಸಿಲುಕಿಕೊಂಡಿದ್ದು, ಸ್ಥಳದಲ್ಲೇ ಐದು ಮಂದಿ ಜೀವಂತವಾಗಿ ಸಾವನ್ನಪ್ಪಿದ್ದಾರೆ.

ಮೊದಲ ಸ್ಫೋಟ ಸಂಭವಿಸಿದ ಕೆಲವೇ ನಿಮಿಷಗಳಲ್ಲಿ, ಅದೇ ಸ್ಥಳದಲ್ಲಿ ಮತ್ತೊಂದು ಶಕ್ತಿಶಾಲಿ ಬಾಂಬ್ ಸ್ಫೋಟಗೊಂಡಿದೆ. ಗಾಯಾಳುಗಳನ್ನು ರಕ್ಷಿಸಲು ಮತ್ತು ಮೃತದೇಹಗಳನ್ನು ಹೊರತೆಗೆಯಲು ಓಡಿಬಂದ ಜನರನ್ನು ಗುರಿಯಾಗಿಸಿಕೊಂಡು ಈ ಎರಡನೇ ಸ್ಫೋಟವನ್ನು ನಡೆಸಲಾಗಿತ್ತು. ಈ ಎರಡನೇ ದುರಂತದಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆಗೆ ಬಳಸುತ್ತಿದ್ದ ವಾಹನವೊಂದು ಸಂಪೂರ್ಣ ಜಖಂಗೊಂಡಿದೆ.

ಇದನ್ನೂ ಓದಿ; ಕೊರೊನಾ ವೈರಸ್ ಜನ್ಮರಹಸ್ಯ ಬಯಲು ಮಾಡಿದ ತುಳಸಿ ಗಬ್ಬಾರ್ಡ್!: ‘ವುಹಾನ್ ಲ್ಯಾಬ್‌ಗೆ ಫೌಸಿ ಹಣ ನೀಡಿದ್ದು ನಿಜ

ಸ್ಫೋಟದ ತೀವ್ರತೆಗೆ ಗಾಯಗೊಂಡವರನ್ನು ಮತ್ತು ಮೃತದೇಹಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದ್ದು, ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದು ಪರಿಶೀಲನೆ ನಡೆಸುತ್ತಿವೆ. ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಸೊಹೈಲ್ ಅಫ್ರಿದಿ, ಇದೊಂದು ಅತ್ಯಂತ ಹೃದಯ ವಿದ್ರಾವಕ ಘಟನೆಯಾಗಿದ್ದು, ಮೃತರ ಕುಟುಂಬಗಳಿಗೆ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಘೋಷಿಸಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಆದೇಶಿಸಿದ್ದು, ಘಟನೆಯ ಕುರಿತು ಸಮಗ್ರ ವರದಿ ಸಲ್ಲಿಸಲು ಪೊಲೀಸರಿಗೆ ಸೂಚಿಸಿದ್ದಾರೆ. ಪ್ರಾಂತ್ಯದ ಗವರ್ನರ್ ಫೈಸಲ್ ಕೆ. ಅವರೂ ಸಹ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು