ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ನಿಧನ

Death

ಮಂಗಳೂರು: ಸುಟ್ಟ ಗಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ (57) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.
ನಗರದ ಕೆಪಿಟಿ ಬಳಿಯ ವ್ಯಾಸ ನಗರದ ಮನೆಯಲ್ಲಿ ಡಿ.28ರಂದು ತರಗೆಲೆಯನ್ನು ಸುಡುವ ವೇಳೆ ಬೆಂಕಿ ತಗುಲಿ ತೀವ್ರ ತರದ ಸುಟ್ಟ ಗಾಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ‌ : ಕಡಬ: ಮನೆಯಂಗಳದಲ್ಲಿ  ಚಿರತೆಯ ಓಡಾಟ ಸಿಸಿಟಿವಿಯಲ್ಲಿ ಸೆರೆ

Advertisement

ಕಾಸರಗೋಡು ಜಿಲ್ಲೆಯ ಕಾವುಗೋಳಿಯ ನಿವಾಸಿಯಾಗಿದ್ದ ಹರಿಶ್ಚಂದ್ರ ಬೈಕಂಪಾಡಿಯಲ್ಲಿ ನೆಲೆಸಿದ್ದರು. ಕೆಲವು ವರ್ಷಗಳ ಹಿಂದೆ ವ್ಯಾಸ ನಗರದಲ್ಲಿ ಮನೆ ಮಾಡಿದ್ದರು. 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಅವರು 33 ವರ್ಷಗಳಿಂದ ಪಾಂಡೇಶ್ವರ ಠಾಣೆ, ಡಿವೈಎಸ್ಪಿ ಕಚೇರಿ, ಎಸಿಪಿ ಕಚೇರಿ, ಕರಾವಳಿ ಕಾವಲು ಪಡೆ, ಸಂಚಾರ ಪೂರ್ವ ಠಾಣೆಯಲ್ಲಿ ಕರ್ತವ್ಯ ನಿರ್ವಹಿ ಸಿದ್ದಾರೆ. 10 ವರ್ಷದ ಹಿಂದೆ ಎಎಸ್ಐ ಆಗಿ ಭಡ್ತಿ ಪಡೆದಿದ್ದರು. ಪಾಂಡೇಶ್ವರದ ಪೊಲೀಸ್ ಲೇನ್ ನ   ಮುನೀಶ್ವರ ಮಹಾಗಣಪತಿ ದೇವಸ್ಥಾನದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿ ಸಿದ್ದಾರೆ.

ಅವರು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Advertisement

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು