ಬೆಳ್ತಂಗಡಿ: ತಾಲ್ಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ರೋಗಿಯೊಬ್ಬರು ಆಸ್ಪತ್ರೆಯ ಆವರಣದಲ್ಲೇ ಶವವಾಗಿ ಪತ್ತೆಯಾಗಿರುವ ಘಟನೆ ಸಂಭವಿಸಿದೆ. ಈ ಸಾವಿಗೆ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಮೃತರನ್ನು ಪುದುವೆಟ್ಟು ಗ್ರಾಮದ ಪೆಲತ್ತಜೆಯ ನಿವಾಸಿ ಅಚ್ಯುತ (42) ಎಂದು ಗುರುತಿಸಲಾಗಿದೆ. ಮೇ 10ರಂದು ಮಧ್ಯಾಹ್ನ ತೀವ್ರ ಹೊಟ್ಟೆನೋವಿನ ಕಾರಣದಿಂದ ಇವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಪಡೆಯುತ್ತಿದ್ದವರು ಆಸ್ಪತ್ರೆಯ ಆವರಣದಲ್ಲೇ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇದನ್ನೂ ಓದಿ: Belthangady : 10 ವರ್ಷಗಳಿಂದ ಪರಾರಿಯಾಗಿದ್ದ ಆರೋಪಿಯ ಬಂಧನ
“ಚಿಕಿತ್ಸೆಗೆಂದು ದಾಖಲಾದ ವ್ಯಕ್ತಿಯ ಬಗ್ಗೆ ಸಿಬ್ಬಂದಿಗಳು ಸರಿಯಾದ ಗಮನ ಹರಿಸಿಲ್ಲ. ರೋಗಿಯು ವಾರ್ಡ್‌ನಿಂದ ಹೊರಗೆ ಹೋದರೂ ಯಾರೂ ಗಮನಿಸಿಲ್ಲ. ಸಿಬ್ಬಂದಿಯ ಈ ಬೇಜವಾಬ್ದಾರಿತನವೇ ಅಚ್ಯುತ ಅವರ ಸಾವಿಗೆ ಕಾರಣ” ಎಂದು ಸಂಬಂಧಿಕರು ದೂರಿದ್ದಾರೆ. ಆಸ್ಪತ್ರೆಯ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


