ಫ್ಲೋರಿಡಾ ಗಾಲ್ಫ್​ ಕೋರ್ಸ್​​ನಲ್ಲಿ ಟ್ರಂಪ್ ಹತ್ಯೆಗೆ ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಫ್ಲೋರಿಡಾದ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಪ್ಟೆಂಬರ್ 15, 2024 ರಂದು ವೆಸ್ಟ್ ಪಾಮ್ ಬೀಚ್‌ನ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕ್ಲಬ್‌ನಲ್ಲಿ ಹತ್ಯೆ ಯತ್ನ ನಡೆದಿತ್ತು.

ಇದನ್ನೂ ಓದಿ: ಫೆ.7-8 ರಂದು ಕೋಡಿoಬಾಡಿಯಲ್ಲಿ ಸತ್ಯನಾರಾಯಣ ಪೂಜೆ

ಯುಎಸ್ ಜಿಲ್ಲಾ ನ್ಯಾಯಾಧೀಶರಾದ ಐಲೀನ್ ಕ್ಯಾನನ್ ಫೋರ್ಟ್​ ಪಿಯರ್ಸ್​ ನ್ಯಾಯಾಲಯದಲ್ಲಿ ರಯಾನ್ ರೌತ್‌ಗೆ ಶಿಕ್ಷೆಯನ್ನು ಪ್ರಕಟಿಸಿದರು. ಸೆಪ್ಟೆಂಬರ್‌ನಲ್ಲಿ ನ್ಯಾಯಾಧೀಶರು ಎಲ್ಲಾ ಆರೋಪಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ ಸ್ವಲ್ಪ ಸಮಯದ ನಂತರ ರೌತ್ ತನ್ನನ್ನು ತಾನೇ ಇರಿದುಕೊಳ್ಳಲು ಪ್ರಯತ್ನಿಸಿದ್ದ.

ರೌತ್​ಗೆ ಶಿಕ್ಷೆ ವಿಧಿಸುವುದನ್ನ ಆರಂಭದಲ್ಲಿ ಡಿಸೆಂಬರ್​ನಲ್ಲಿ ನಿಗದಿಪಡಿಸಲಾಗಿತ್ತು. ಸಿಎನ್‌ಎನ್ ಪ್ರಕಾರ, ಸೆಪ್ಟೆಂಬರ್‌ನಲ್ಲಿ ಟ್ರಂಪ್ 2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಪ್ರಚಾರ ಮಾಡುತ್ತಿದ್ದಾಗ, ಟ್ರಂಪ್ ಮೇಲೆ ದಾಳಿ ನಡೆದಿತ್ತು. ಅಧ್ಯಕ್ಷೀಯ ಅಭ್ಯರ್ಥಿಯ ಹತ್ಯೆಗೆ ಯತ್ನಿಸಿದ್ದು ಸೇರಿದಂತೆ ಐದು ಆರೋಪಗಳಲ್ಲಿ ರೌತ್ ತಪ್ಪಿತಸ್ಥನೆಂದು ಸಾಬೀತಾಯಿತು.

59 ವರ್ಷದ ರೌತ್, ಕಳೆದ ವರ್ಷ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕ್ಲಬ್‌ನಲ್ಲಿ ಆಗ ಅಧ್ಯಕ್ಷೀಯ ಅಭ್ಯರ್ಥಿಯಾಗಿದ್ದ ಟ್ರಂಪ್ ಅವರನ್ನು ಕೊಲ್ಲಲು ಪ್ರಯತ್ನಿಸಿದ ಆರೋಪದಲ್ಲಿ ತಪ್ಪಿತಸ್ಥನೆಂದು ಸಾಬೀತಾಗಿದೆ. ಈ ಪ್ರಕರಣದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ರೌತ್ ಅವರ ವಕೀಲ ಮಾರ್ಟಿನ್ ರಾಸ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News