Breaking News

ಹೊಸ ದಾಖಲೆ ಬರೆದ ಪ್ರಧಾನಿ ಮೋದಿ’ ಈ ದಾಖಲೆ ಬರೆದ ವಿಶ್ವದ ಮೊದಲ ನಾಯಕ ನಮೋ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಐತಿಹಾಸಿಕ ಸಾಧನೆ ಮಾಡಿದ್ದು, ಇನ್‌ಸ್ಟಾಗ್ರಾಂನಲ್ಲಿ 100 ಮಿಲಿಯನ್ ಅನುಯಾಯಿಗಳನ್ನು ಹೊಂದಿದ ಮೊದಲ ವಿಶ್ವ ನಾಯಕ ಹಾಗೂ ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ. 2014ರಲ್ಲಿ ಇನ್‌ಸ್ಟಾಗ್ರಾಂ ಸೇರ್ಪಡೆಗೊಂಡ ಪ್ರಧಾನಮಂತ್ರಿ ಮೋದಿ ಅವರು, ಇತರ ವಿಶ್ವ ನಾಯಕರಿಗಿಂತ ಎರಡು ಪಟ್ಟಿಗಿಂತಲೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ.

ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 15 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದು, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ 43.2 ಮಿಲಿಯನ್ ಅನುಯಾಯಿಗಳಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲುಲಾ ಅವರು 14.4 ಮಿಲಿಯನ್, ಟರ್ಕಿ ಅಧ್ಯಕ್ಷ ಎರ್ಡೋಗನ್ ಅವರು 11.6 ಮಿಲಿಯನ್ ಹಾಗೂ ಅರ್ಜೆಂಟಿನಾ ಅಧ್ಯಕ್ಷ ಜೇಮಿಯರ್ ಮಿಲೀ ಅವರು 6.4 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ.

Advertisement

ಇದನ್ನೂ ಓದಿ: ಅಂದು ನಾನು ಮಧ್ಯಪ್ರವೇಶಿಸದಿದ್ದರೆ ಆಪರೇಷನ್​​ ಸಿಂಧೂರ್​​ದಲ್ಲಿ ಪಾಕ್​​ ಪ್ರಧಾನಿ ಷರೀಫ್ ಜೀವಂತ ಇರುತ್ತಿರಲಿಲ್ಲ: ಡೊನಾಲ್ಡ್ ಟ್ರಂಪ್

ಭಾರತದಲ್ಲಿ ಕೂಡ ಪ್ರಧಾನಿ ಮೋದಿ ಅವರು ಇನ್‌ಸ್ಟಾಗ್ರಾಂನಲ್ಲಿ ಇತರ ರಾಜಕೀಯ ನಾಯಕರಿಗಿಂತ ಬಹಳ ಮುನ್ನಡೆ ಸಾಧಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 16.1 ಮಿಲಿಯನ್ ಅನುಯಾಯಿಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 12.6 ಮಿಲಿಯನ್ ಅನುಯಾಯಿಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು