ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಕರ್ನಾಟಕದ ಮೂಲಸೌಕರ್ಯ ಹಾಗೂ ಸಾರಿಗೆ ಕ್ಷೇತ್ರಕ್ಕೆ ಭರ್ಜರಿ ಕೊಡುಗೆಗಳನ್ನು ನೀಡಲಿದ್ದಾರೆ. ವಿಶೇಷವೆಂದರೆ, ಇಂದಿನ ತಮ್ಮ ಬೆಂಗಳೂರು ಪ್ರವಾಸ ಮತ್ತು ಮೆಗಾ ಯೋಜನೆಗಳ ಉದ್ಘಾಟನೆಯ ಕುರಿತು ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ (Instagram Story) ಹಂಚಿಕೊಂಡಿರುವ ಪೋಸ್ಟ್ ಈಗ ಕರುನಾಡಿನಲ್ಲಿ ಭಾರಿ ವೈರಲ್ ಆಗಿದೆ.
ಪ್ರಧಾನಿ ಮೋದಿ ಅವರು ತಮ್ಮ ಇಂದಿನ ಬೆಂಗಳೂರು ಕಾರ್ಯಕ್ರಮಗಳ ಕುರಿತು ಹಂಚಿಕೊಂಡಿರುವ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಮಂಗಳೂರಿನ ಕೊಡುಗೆಯನ್ನು ಕೊಂಡಾಡಿದ್ದಾರೆ. ಪ್ರಧಾನಿ ಮೋದಿ ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಮಂಗಳೂರು ಹಾಗೂ ಬೆಂಗಳೂರಿನ ಬಗ್ಗೆ ಮಹತ್ವದ ಸಾಧನೆಯೂ ಇಡೀ ದೇಶಕ್ಕೆ ಒಂದು ಸ್ಪೂರ್ತಿಯಾಗಿದೆ.

ಇದನ್ನೂ ಓದಿ: ಬೆಂಗಳೂರು ನಮ್ಮ ಮೆಟ್ರೋ ‘ಗುಲಾಬಿ ಮಾರ್ಗ’ ಉದ್ಘಾಟನೆಗೆ ಮುಹೂರ್ತ ಫಿಕ್ಸ್!: ನ.13ಕ್ಕೆ ಪ್ರಧಾನಿ ಮೋದಿ ಚಾಲನೆ
ಇನ್ಸ್ಟಾಗ್ರಾಮ್ ಪೋಸ್ಟ್ ಇಲ್ಲಿದೆ ನೋಡಿ:

View this post on Instagram
ಕರುನಾಡಿಗೆ ಪ್ರಧಾನಿ ಮೋದಿ ನೀಡುತ್ತಿರುವ 3 ಮಹತ್ವದ ಕೊಡುಗೆಗಳು:
ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಕೆಳಗಿನ ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ನಮ್ಮ ಮೆಟ್ರೋ ‘ಪಿಂಕ್ ಲೈನ್’ (Pink Line Metro): ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡುವ ಮಹತ್ವಾಕಾಂಕ್ಷಿ ಪಿಂಕ್ ಮಾರ್ಗದ ಮೆಟ್ರೋ ರೈಲು ಸಂಚಾರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ.
ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್: ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಗರಿ ಮಂಗಳೂರನ್ನು ಅತಿ ವೇಗವಾಗಿ ಸಂಪರ್ಕಿಸುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ.
MRPL ‘ದೇವನಗೋಂತಿ ಮಾರ್ಕೆಟಿಂಗ್ ಟರ್ಮಿನಲ್’: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ನ (MRPL) ಅತ್ಯಾಧುನಿಕ ‘ದೇವನಗೋಂತಿ ಮಾರ್ಕೆಟಿಂಗ್ ಟರ್ಮಿನಲ್’ (Devanagonthi Marketing Terminal) ಅನ್ನು ಪ್ರಧಾನಿ ಲೋಕಾರ್ಪಣೆ ಮಾಡಲಿದ್ದು, ಇದು ರಾಜ್ಯದ ಇಂಧನ ಪೂರೈಕೆ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ದೊಡ್ಡ ಬಲ ನೀಡಲಿದೆ.


