ದೆಹಲಿಯ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ: ದೇಶದ ಸಮೃದ್ಧಿ, ಪ್ರಗತಿ ಹಾಗೂ ಜನರ ಒಳಿತಿಗಾಗಿ ಪ್ರಾರ್ಥನೆ

ದೆಹಲಿ: ರಾಜಧಾನಿ ನವದೆಹಲಿಯ ಪ್ರಸಿದ್ಧ ಶ್ರೀ ವಿನಾಯಕ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದ ಪ್ರಧಾನಿ ಮೋದಿ, ಭಗವಾನ್ ಶ್ರೀ ಗಣೇಶನಿಗೆ ವಿಶೇಷ ಪೂಜೆ, ಪುನಸ್ಕಾರ ಹಾಗೂ ಅರ್ಚನೆಗಳನ್ನು ನೆರವೇರಿಸಿದರು. ದೇಶದಾದ್ಯಂತ ನೆಲೆಸಿರುವ ಸಮಸ್ತ ನಾಗರಿಕರ ಸುಖ, ಶಾಂತಿ, ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ವಿಘ್ನನಿವಾರಕ ಶ್ರೀ ಮಹಾಗಣಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ದೇವಸ್ಥಾನದಲ್ಲಿ ವೈದಿಕ ಮಂತ್ರೋಚ್ಚಾರಣೆಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಪೂಜಾ ಕೈಂಕರ್ಯಗಳ ಬಳಿಕ ಮಾತನಾಡಿದ ಅವರು, “ವಿಘ್ನಹರ್ತನ ಕೃಪಾಕಟಾಕ್ಷವು ಸದಾ ಸಮಸ್ತ ಜನಕೋಟಿಯ ಮೇಲಿರಲಿ. ಪ್ರತಿಯೊಬ್ಬರ ಜೀವನದಲ್ಲೂ ಮಂಗಲ ಉಂಟಾಗಲಿ ಹಾಗೂ ನಮ್ಮ ದೇಶವು ಸದಾ ನಿರಂತರ ಅಭಿವೃದ್ಧಿ ಮತ್ತು ಪ್ರಗತಿಯ ಹಾದಿಯಲ್ಲಿ ಮುನ್ನಡೆಯಲಿ,” ಎಂದು ಶುಭ ಹಾರೈಸಿದರು.

ಇದನ್ನೂ ಓದಿ:  ವಿಧಾನಸೌಧದಲ್ಲಿ ‘ಉರ್ದು ಹಬ್ಬ’ ಆಚರಣೆಗೆ ಸರ್ಕಾರದ ನಿರ್ಧಾರ: ವೋಟ್‌ಬ್ಯಾಂಕ್ ರಾಜಕಾರಣ ಎಂದು ಬಿಜೆಪಿ ಆಕ್ರೋಶ

ದೇವಸ್ಥಾನದ ಅರ್ಚಕರು ನೂತನ ವಸ್ತ್ರ, ಪ್ರಸಾದ ನೀಡಿ ಗೌರವಿಸಿದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹಲವಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *