ಎಸ್‌ಬಿಐ, ಕೆನರಾ ಬ್ಯಾಂಕ್ ಮತ್ತು ಪಿಎನ್‌ಬಿ ವಿಲೀನ ಸುದ್ದಿ ಸಂಪೂರ್ಣ ಸುಳ್ಳು!: ಸಾಮಾಜಿಕ ಜಾಲತಾಣಗಳ ವೈರಲ್ ಪೋಸ್ಟ್‌ಗೆ ‘ಪಿಐಬಿ ಫ್ಯಾಕ್ಟ್ ಚೆಕ್’ ಸ್ಪಷ್ಟನೆ!

ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ಕೆನರಾ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಮೂರು ಒಟ್ಟಿಗೆ ವಿಲೀನಗೊಳ್ಳಲಿವೆ (Merger) ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಈ ವೈರಲ್ ಹಕ್ಕು ಸಂಪೂರ್ಣ ಸುಳ್ಳು ಮತ್ತು ಸತ್ಯಕ್ಕೆ ದೂರವಾಗಿದೆ ಎಂದು ಭಾರತ ಸರ್ಕಾರದ ಅಧಿಕೃತ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಫ್ಯಾಕ್ಟ್ ಚೆಕ್ ಸ್ಪಷ್ಟಪಡಿಸಿದೆ.

ಕಳೆದ ಕೆಲವು ದಿನಗಳಿಂದ ವಿವಿಧ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಚಿತ್ರವೊಂದು (Image) ಭಾರಿ ವೇಗವಾಗಿ ಹರಿದಾಡುತ್ತಿತ್ತು. “ಕೇಂದ್ರ ಸರ್ಕಾರವು ಎಸ್‌ಬಿಐ, ಕೆನರಾ ಬ್ಯಾಂಕ್ ಮತ್ತು ಪಿಎನ್‌ಬಿ ಬ್ಯಾಂಕ್‌ಗಳ ವಿಲೀನಕ್ಕೆ ಅಧಿಕೃತ ಅನುಮೋದನೆ ನೀಡಿದೆ” ಎಂಬ ಆಘಾತಕಾರಿ ಹಕ್ಕನ್ನು ಆ ಚಿತ್ರದಲ್ಲಿ ಮಾಡಲಾಗಿತ್ತು. ಇದು ಬ್ಯಾಂಕ್ ಗ್ರಾಹಕರು ಹಾಗೂ ಸಾರ್ವಜನಿಕರಲ್ಲಿ ಭಾರಿ ಗೊಂದಲವನ್ನು ಸೃಷ್ಟಿಸಿತ್ತು.

Advertisement

ಈ ಕುರಿತು ತನ್ನ ಅಧಿಕೃತ ‘ಎಕ್ಸ್’ (X) ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ಫ್ಯಾಕ್ಟ್ ಚೆಕ್ ವಿಭಾಗವು ಸತ್ಯಾಂಶವನ್ನು ಬಹಿರಂಗಪಡಿಸಿದೆ.

“ಸಾಮಾಜಿಕ ಜಾಲತಾಣಗಳಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB), ಕೆನರಾ ಬ್ಯಾಂಕ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವಿಲೀನಕ್ಕೆ ಸರ್ಕಾರ ಅನುಮೋದನೆ ನೀಡಿದೆ ಎಂದು ಬಿಂಬಿಸುವ ಚಿತ್ರವೊಂದು ಹರಿದಾಡುತ್ತಿದ್ದು, ಇದು ಸಂಪೂರ್ಣವಾಗಿ ಸುಳ್ಳಾಗಿದೆ,” ಎಂದು ಪಿಐಬಿ ತಿಳಿಸಿದೆ. ಕೇಂದ್ರ ಸರ್ಕಾರ ಇಂತಹ ಯಾವುದೇ ಪ್ರಸ್ತಾವನೆ ಅಥವಾ ವಿಲೀನಕ್ಕೆ ಒಪ್ಪಿಗೆ ನೀಡಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ:2 ಲಕ್ಷದಿಂದ ಆರಂಭವಾದ ಕ್ಲೌಡ್ ಕಿಚನ್ ತಂದಿಟ್ಟಿತು 1 ಕೋಟಿ ಸಾಲದ ಗಂಡಾಂತರ!: 25ರ ಯುವ ಉದ್ಯಮಿಯ ‘ನೈಟ್‌ಮೇರ್ ಸ್ಟೋರಿ’

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಬರುವ ಭಾರತ ಸರ್ಕಾರದ ನೋಡಲ್ ಏಜೆನ್ಸಿಯಾದ ಪಿಐಬಿ, ಇಂತಹ ನಕಲಿ ಮತ್ತು ದಿಕ್ಕು ತಪ್ಪಿಸುವ ಸುದ್ದಿಗಳ ಬಗ್ಗೆ ಸಾರ್ವಜನಿಕರು ಎಚ್ಚರದಿಂದಿರಬೇಕು ಮತ್ತು ಇಂತಹ ವದಂತಿಗಳನ್ನು ನಂಬಬಾರದು ಎಂದು ವಿನಂತಿಸಿದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *