ಪ್ರಯಾಗ್ರಾಜ್: ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಸಂಕಷ್ಟ ಎದುರಾಗಿದೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಂಕರಾಚಾರ್ಯರು ಮತ್ತು ಅವರ ಶಿಷ್ಯ ಮುಕುಂದಾನಂದ ಗಿರಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪ್ರಯಾಗ್ರಾಜ್ನ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ. ವಾರಾಣಸಿಯ ಶ್ರೀ ವಿದ್ಯಾಮಠದ ಗುರುಕುಲದಲ್ಲಿ ‘ಗುರು ಸೇವೆ’ಯ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್ನ ಅಧ್ಯಕ್ಷ ಅಶುತೋಷ್ ಬ್ರಹ್ಮಚಾರಿ ಮಹಾರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು.
ದೂರುದಾರರು ಸುಮಾರು 20ಕ್ಕೂ ಹೆಚ್ಚು ಮಕ್ಕಳ ಮೇಲೆ ಕಿರುಕುಳ ನಡೆದಿದೆ ಎಂದು ಆರೋಪಿಸಿದ್ದು, ಇದಕ್ಕೆ ಪೂರಕವಾಗಿ ವಿಡಿಯೋ ಇರುವ ಸಿಡಿಗಳನ್ನು ಸಾಕ್ಷ್ಯವಾಗಿ ನೀಡಿದ್ದಾರೆ. ದೂರು ಮತ್ತು ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲಿಸಿದ ವಿಶೇಷ ನ್ಯಾಯಾಧೀಶರು, ಶಂಕರಾಚಾರ್ಯರು ಮತ್ತು ಮುಕುಂದಾನಂದ ಗಿರಿ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಪ್ರಯಾಗ್ರಾಜ್ನ ಜೋನ್ಸಿ ಪೊಲೀಸ್ ಠಾಣೆಗೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ಭಾರತದ ಮರ್ಯಾದೆ ಹಾಳು ಮಾಡಬೇಡಿ: ಎಐ ಶೃಂಗಸಭೆಯಿಂದ ಕಾಂಗ್ರೆಸ್ ಕಾರ್ಯಕರ್ತರನ್ನು ಒದ್ದು ಹೊರ ಹಾಕಿದ ಸಾರ್ವಜನಿಕರು
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಅಪ್ರಾಪ್ತ ಬಾಲಕಿಯರ ರಹಸ್ಯ ಹೇಳಿಕೆಗಳನ್ನು ನ್ಯಾಯಾಲಯ ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ. ಒಂದೆಡೆ ದೂರುದಾರರು ಇದೊಂದು ಗಂಭೀರ ಅಪರಾಧ ಎಂದು ವಾದಿಸುತ್ತಿದ್ದರೆ, ಇನ್ನೊಂದೆಡೆ ಸ್ವಾಮೀಜಿ ಬೆಂಬಲಿಗರು ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಶಂಕರಾಚಾರ್ಯರು ನಡೆಸುತ್ತಿರುವ ಗೋಸಂರಕ್ಷಣೆ ಮತ್ತು ಧಾರ್ಮಿಕ ಹೋರಾಟಗಳನ್ನು ಹತ್ತಿಕ್ಕಲು ವಿರೋಧಿಗಳು ಮಾಡಿರುವ ವ್ಯವಸ್ಥಿತ ಸಂಚು ಇದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

