ನವದೆಹಲಿ: ದೆಹಲಿ ಮತ್ತು ಪಂಜಾಬ್ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಾರ್ಟಿಯ (AAP) ಪ್ರಭಾವಿ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ (BJP) ಸೇರಿದ್ದಾರೆ. ಅವರೊಂದಿಗೆ ಎಎಪಿಯ ಇತರ ಪ್ರಮುಖ ಸಂಸದರಾದ ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಕೂಡ ಕಮಲ ಪಾಳಯಕ್ಕೆ ಸೇರ್ಪಡೆಯಾಗುವ ಮೂಲಕ ಕೇಜ್ರಿವಾಲ್ ಪಡೆಗೆ ದೊಡ್ಡ ಹೊಡೆತ ನೀಡಿದ್ದಾರೆ.
ಬಿಜೆಪಿ ನಾಯಕ ಮತ್ತು ಛತ್ತೀಸ್‌ಗಢದ ಉಸ್ತುವಾರಿ ನಿತಿನ್ ನಬಿನ್ ಅವರು ರಾಘವ್ ಚಡ್ಡಾ ಮತ್ತು ಇತರ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನಾಯಕರಿಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಲಾಯಿತು. ಎಎಪಿಯ ಮೂರನೇ ಎರಡರಷ್ಟು (2/3) ರಾಜ್ಯಸಭಾ ಸಂಸದರು ಬಿಜೆಪಿಯೊಂದಿಗೆ ವಿಲೀನಗೊಳ್ಳುತ್ತಿರುವುದು ದೆಹಲಿ ರಾಜಕೀಯದ ಇತಿಹಾಸದಲ್ಲೇ ಅತಿ ದೊಡ್ಡ ಪಕ್ಷಾಂತರ ಎನಿಸಿಕೊಂಡಿದೆ.

ಇದನ್ನೂ ಓದಿ: ಆಮ್ ಆದ್ಮಿ ಪಾರ್ಟಿಗೆ ಬಿಗ್ ಶಾಕ್: ಬಿಜೆಪಿಯತ್ತ ರಾಘವ್ ಚಡ್ಡಾ! ಕಮಲ ಹಿಡಿಯಲಿದ್ದಾರೆ ಎಎಪಿಯ 2/3 ಭಾಗದ ಸಂಸದರು!
ರಾಘವ್ ಚಡ್ಡಾ ಅವರಂತಹ ಯುವ ಮತ್ತು ಪ್ರಭಾವಿ ನಾಯಕರು ಪಕ್ಷ ತೊರೆದಿರುವುದು ಅರವಿಂದ್ ಕೇಜ್ರಿವಾಲ್ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. “ದೇಶದ ಅಭಿವೃದ್ಧಿ ಮತ್ತು ಪ್ರಧಾನಿ ಮೋದಿಯವರ ಕಾರ್ಯವೈಖರಿಯನ್ನು ಮೆಚ್ಚಿ ನಾವು ಈ ನಿರ್ಧಾರ ಕೈಗೊಂಡಿದ್ದೇವೆ” ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯಿಂದಾಗಿ ರಾಜ್ಯಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ ಮತ್ತಷ್ಟು ಬಲಗೊಂಡಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

