ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ: 8 ಮಂದಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿದ ಬೆಂಗಳೂರು ಕೋರ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಅಶ್ಲೀಲ ಫೋಟೋ ಹಾಗೂ ವೀಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಸಾರ್ವಜನಿಕವಾಗಿ ಹಂಚಿಕೆ ಮಾಡಿದ ಆರೋಪ ಹೊತ್ತಿರುವ ೮ ಮಂದಿ ಆರೋಪಿಗಳಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

ಬೆಂಗಳೂರಿನ 42ನೇ ಎಸಿಜೆಎಂ (ACJM) ನ್ಯಾಯಾಲಯದ ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.ಮಾಹಿತಿ ತಂತ್ರಜ್ಞಾನ (IT) ಕಾಯ್ದೆಯ ಸೆಕ್ಷನ್ ೬೭ಎ ಹಾಗೂ ಐಪಿಸಿ ಸೆಕ್ಷನ್ ೫೦೯ ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ನಿರ್ದೇಶಿಸಿದೆ.

ಸಮನ್ಸ್ ಜಾರಿಯಾದ 8 ಮಂದಿ ಆರೋಪಿಗಳ ವಿವರ:

ಎ೨: ನವೀನ್ ಗೌಡ

ಎ೩: ಹೆಚ್.ಪಿ. ಲಿಖಿತ್

ಎ೪: ಎಂ.ಜೆ. ನಿಶಾಂತ್

ಎ೫: ಎಸ್.ಕೆ. ಕಿರಣ್

ಎ೬: ಎಂ.ಜಿ. ಶರತ್

ಎ೭: ಡಿ.ಎನ್. ತೇಜಸ್

ಎ೮: ಸಿ. ಗಗನ್ ಕುಮಾರ್

ಎ೯: ಹೆಚ್. ರೇವಂತ್

ಇದನ್ನೂ ಓದಿ: Crime : ಪತ್ನಿಯನ್ನು ಹೂತ ಜಾಗದಲ್ಲೇ ನಾಯಿಯ ಶವವನ್ನು ಹೂತು ಯಾಮಾರಿಸಿದ ಪಾಪಿ ಪತಿ

ಪೆನ್‌ಡ್ರೈವ್‌ಗಳ ಮೂಲಕ ದೃಶ್ಯಾವಳಿಗಳನ್ನು ಹಂಚಿಕೆ ಮಾಡಿ ಸಂತ್ರಸ್ತೆಯರ ತೇಜೋವಧೆ ಹಾಗೂ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ವಿಶೇಷ ತನಿಖಾ ತಂಡ (SIT) ಸಲ್ಲಿಸಿದ್ದ ವರದಿ ಮತ್ತು ಸಾಕ್ಷ್ಯಾಧಾರಗಳನ್ನು ಪುರಸ್ಕರಿಸಿದ ಕೋರ್ಟ್, ಈ ಎಂಟು ಮಂದಿಗೆ ಸಮನ್ಸ್ ಜಾರಿ ಮಾಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *