ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನಾಲ್ಕು ವರ್ಷಗಳ ಬಳಿಕ ಮತ್ತಿಬ್ಬರು ಆರೋಪಿಗಳು ಎನ್‌ಐಎ ಬಲೆಗೆ

praveen-nettaru-murder-case-nia-arrests-another-accused

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣದ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಬಂಧಿತನನ್ನು ಪ್ರಕರಣದ 23ನೇ ಆರೋಪಿ ಬೆಳ್ತಂಗಡಿ ತಾಲೂಕಿನ ಪಂಗಡ ನಿವಾಸಿ ನೌಷಾದ್ ಮತ್ತು ಪ್ರಕರಣದ 22ನೇ ಆರೋಪಿ ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ಅಬ್ದುಲ್‌ ನಾಸೀರ್‌ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಜು.11 ರಂದು ಬಂಧಿಸಲಾಗಿದೆ.

ಇದನ್ನೂ ಓದಿ: ಯುವತಿಯ ಮದುವೆ ವಿಚಾರದಲ್ಲಿ ಜಗಳ, ದೂರು-ಪ್ರತಿದೂರು ದಾಖಲು

ಪ್ರವೀಣ್ ನೆಟ್ಟಾರು ಹತ್ಯೆ ನಡೆದ ಬಳಿಕ ಆತ ತಲೆಮರೆಸಿಕೊಂಡಿದ್ದನೆಂದು ಹೇಳಲಾಗಿದ್ದು, ಆತನ ಪತ್ತೆಗಾಗಿ ಎನ್‌ಐಎ ಅಧಿಕಾರಿಗಳು ಹಲವು ತಿಂಗಳುಗಳಿಂದ ಶೋಧ ಕಾರ್ಯ ನಡೆಸುತ್ತಿದ್ದರು. ಅಲ್ಲದೆ, ಆರೋಪಿಗಳ ಸುಳಿವು ನೀಡಿದವರಿಗೆ ತಲಾ ಎರಡು ಲಕ್ಷ ರೂ. ಬಹುಮಾನ ಘೋಷಿಸಿತ್ತು.

ಇದೀಗ ಇಬ್ಬರನ್ನು ವಶಕ್ಕೆ ಪಡೆದಿರುವ ಕುರಿತು ಮಾಹಿತಿ ದೊರೆತಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ 28 ಆರೋಪಿಗಳ ಪೈಕಿ 21 ಆರೋಪಿಗಳನ್ನು ಈಗಾಗಲೇ ಎನ್‌ಐಎ ಬಂಧಿಸಿದ್ದು, ಚಾರ್ಜ್‌ಶೀಟ್ ಕೂಡ ಸಲ್ಲಿಸಿದೆ. ಪ್ರಕರಣದ ತನಿಖೆ ಇನ್ನೂ ಮುಂದುವರಿದಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *