ಪೇಪರ್ ಲೀಕ್ ತಡೆಗೆ ಕೇಂದ್ರದಿಂದ ಕಠಿಣ ತಿದ್ದುಪಡಿ ಕಾಯ್ದೆ: ಜುಲೈ 27ಕ್ಕೆ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ವಿಧೇಯಕ-2026’ ಮಂಡನೆ

ನವದೆಹಲಿ: ‘ನೀಟ್’ (NEET-UG 2026) ಪರೀಕ್ಷಾ ಅಕ್ರಮ ಹಾಗೂ ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಪರೀಕ್ಷಾ ವಂಚನೆಗಳನ್ನು ತಡೆಯಲು ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ (Public Examinations Amendment Bill 2026) ಯನ್ನು ಜುಲೈ ೨೭ರ ಸೋಮವಾರದಂದು ಲೋಕಸಭೆಯಲ್ಲಿ ಮಂಡಿಸಲಾಗುತ್ತಿದೆ.

ಸಂಸದೀಯ ಕಾರ್ಯಸೂಚಿಯಂತೆ, ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಈ ಮಹತ್ವದ ತಿದ್ದುಪಡಿ ವಿಧೇಯಕವನ್ನು ಮಂಡಿಸಲಿದ್ದಾರೆ.

2024ರ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಈ ಕೆಳಗಿನ ಅತ್ಯಂತ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ.  ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗುವ ವ್ಯಕ್ತಿಗಳಿಗೆ ಹಾಲಿ ಇರುವ ೩ ರಿಂದ 5 ವರ್ಷಗಳ ಶಿಕ್ಷೆಯನ್ನು 5 ರಿಂದ 10 ವರ್ಷಗಳ ಅವಧಿಗೆ ವಿಸ್ತರಿಸಲು ಹಾಗೂ ದಂಡದ ಮೊತ್ತವನ್ನು ₹೫೦ ಲಕ್ಷದವರೆಗೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ: ಮಹಾರಾಷ್ಟ್ರದಲ್ಲಿ ತಡೆಹಿಡಿದಿದ್ದ ಲಾರಿಗಳ ಬಿಡುಗಡೆಗೆ ಸಿಎಂ ಫಡ್ನವೀಸ್ ಒಪ್ಪಿಗೆ

ಪೇಪರ್ ಲೀಕ್ ಮಾಫಿಯಾ ಹಾಗೂ ಸಂಘಟಿತ ಅಪರಾಧಗಳಲ್ಲಿ ಭಾಗಿಯಾಗುವ ನೆಟ್‌ವರ್ಕ್‌ಗಳಿಗೆ ಕನಿಷ್ಠ 7 ವರ್ಷ ಜೈಲು ಮತ್ತು ₹೧೦ ಕೋಟಿ ದಂಡ ವಿಧಿಸಲಾಗುತ್ತದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *