ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕೊಡಿಪ್ಪಾಡಿ ಮತ್ತು ಕುಳ ಘಟಕ ಹಾಗೂ ರೋಟರಿ ಕ್ಲಬ್ ಪುತ್ತೂರು ಇವುಗಳ ಆಶ್ರಯದಲ್ಲಿ, ಶ್ರೀ ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಭ ಟ್ರಸ್ಟ್, ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಆಗಸ್ಟ್ 9ರಂದು ಆಯೋಜಿಸಲಾಗಿದೆ.
ಶಿಬಿರವು ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಓಜಾಲದಲ್ಲಿ ಬೆಳಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ ನಡೆಯಲಿದೆ.
ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಟ್ರಸ್ಟ್ ನ ಕುಳ ಘಟಕದ ಗೌರವ ಸಲಹೆಗಾರ ವಿಷ್ಣುಮೂರ್ತಿ ಕೆದಿಲಾಯ ಅವರು ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ: ಪುತ್ತೂರು: ನರಿಮೊಗರಿನಲ್ಲಿ ಮತ್ತೆ ಪುತ್ತಿಲ ಪರಿವಾರದಿಂದ ಪ್ರತಿಭಟನೆ, ಗುಡುಗಿದ ಅರುಣ್ ಕುಮಾರ್ ಪುತ್ತಿಲ
ರಕ್ತದಾನ, ಕಿವಿ, ಮೂಗು ಗಂಟಲು ತಪಾಸಣೆ, ಕಣ್ಣಿನ ಪರೀಕ್ಷೆ, ಉಚಿತ ಕನ್ನಡಕ ವಿತರಣೆ, ಶುಗರ್ ಟೆಸ್ಟ್, ದಂತ ಪರೀಕ್ಷೆ, ದಂತ ಫಿಲ್ಲಿಂಗ್, ಎಲುಬು, ಚರ್ಮಕ್ಕೆ ಸಂಬಂಧಿಸಿದ ತಪಾಸಣೆ ನಡೆಯಲಿದೆ. ಮಕ್ಕಳ ವಿಭಾಗವೂ ಇರಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆಗೆ ರಕ್ತದಾನದ ಮೂಲಕ ಜೀವ ಉಳಿಸುವ ಮಾನವೀಯ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.

