ಪುತ್ತೂರು: ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಪುತ್ತೂರಿನ ಸುದಾನ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿನಿಯರ ತಂಡವು ಭರ್ಜರಿ ಜಯಗಳಿಸಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಈ ಗೆಲುವಿನ ಮೂಲಕ ಅಂಬಿಕಾ ವಿದ್ಯಾಲಯದ ಕ್ರೀಡಾಪಟುಗಳು ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಾಧಕರು:
ಅದಿತಿ ಯು. ಎನ್. (ದ್ವಿತೀಯ ಪಿಯುಸಿ ಕಾಮರ್ಸ್)
ಅವನಿ ಯು. ಎನ್. (ದ್ವಿತೀಯ ಪಿಯುಸಿ ಕಾಮರ್ಸ್)
ಸಾನ್ವಿ ರಾಧ ಎಸ್. (ಪ್ರಥಮ ಪಿಯುಸಿ ಸೈನ್ಸ್)
ಅತ್ಯುತ್ತಮ ಕ್ರೀಡಾ ಪ್ರದರ್ಶನ ನೀಡಿದ ಈ ಮೂವರು ವಿದ್ಯಾರ್ಥಿನಿಯರು ಮುಂಬರುವ ಅಕ್ಟೋಬರ್ ತಿಂಗಳಿನಲ್ಲಿ ನವದೆಹಲಿಯಲ್ಲಿ ಆಯೋಜನೆಗೊಳ್ಳಲಿರುವ ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ಇದನ್ನೂ ಓದಿ: ನೇಪಾಳ ದುರಂತಕ್ಕೂ ಮುನ್ನ ಸಿಕ್ಕಿತ್ತಾ ದೈವಿಕ ಮುನ್ಸೂಚನೆ? ಪಲಾಂಚೋಕ್ ಭಗವತಿ ವಿಗ್ರಹ ಬೆವತ 2 ದಿನದಲ್ಲೇ ಪ್ರಳಯ
ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಸಿಬ್ಬಂದಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

