ಪುತ್ತೂರು: ಕಾಲೇಜು ವಿದ್ಯಾರ್ಥಿಯ ಮೇಲೆ ಐವರ ತಂಡದಿಂದ ಮಾರಣಾಂತಿಕ ದಾಳಿ; ಹಳೆ ದ್ವೇಷವೇ ಕಾರಣ?

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಬಸ್ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಐವರ ತಂಡವೊಂದು ಕಲ್ಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದೆ.

ಪುತ್ತೂರಿನ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಆದಿಲ್ ಹುಸೈನ್ (21) ಹಲ್ಲೆಗೊಳಗಾದವರು. ಆದಿಲ್ ಅವರು ಬಸ್ ನಿಲ್ದಾಣದ ಸಮೀಪವಿರುವ ಟೀ ಅಂಗಡಿಯೊಂದರ ಬಳಿ ನಿಂತಿದ್ದಾಗ, ಹಠಾತ್ ದಾಳಿ ನಡೆಸಿದ ಐವರ ತಂಡವು ಕಲ್ಲಿನಿಂದ ತಲೆ ಹಾಗೂ ಮುಖದ ಭಾಗಕ್ಕೆ ತೀವ್ರವಾಗಿ ಹೊಡೆದಿದೆ. ದಾಳಿಯಿಂದಾಗಿ ಆದಿಲ್ ಅವರ ಮುಖ ಮತ್ತು ತಲೆಯಲ್ಲಿ ತೀವ್ರ ರಕ್ತಸ್ರಾವ ಉಂಟಾಗಿದ್ದು, ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಲ್ಲೆಗೆ ಕಾರಣವೇನು?

ಹಲ್ಲೆಗೊಳಗಾದ ಆದಿಲ್ ನೀಡಿರುವ ದೂರಿನ ಪ್ರಕಾರ, ಹಳೇ ದ್ವೇಷವೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಇತ್ತೀಚೆಗೆ ಕಾಲೇಜಿನಲ್ಲಿ ಮೊಹಿಯುದ್ದೀನ್ ತಂಡವು ಇತರ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡುತ್ತಿದ್ದಾಗ ಆದಿಲ್ ಅದನ್ನು ತಡೆದಿದ್ದರು. ಇದೇ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಮೊಹಿಯುದ್ದೀನ್, ಮೋಹದ್ ಮತ್ತು ಇತರ ಮೂವರು ಸೇರಿ ಈ ದಾಳಿ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ತಲವಾರ್, ರಾಡ್‌ನಿಂದ ಮಾರಾಮಾರಿ; ರಕ್ತಸಿಕ್ತ ಕಾದಾಟ!

ಘಟನೆಗೆ ಸಂಬಂಧಿಸಿದಂತೆ ಆದಿಲ್ ಹುಸೈನ್ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು