ಪುತ್ತೂರು ಫುಡ್ ಫೆಸ್ಟ್‌ಗೂ ತಟ್ಟಿದ ಗ್ಯಾಸ್ ಕಂಟಕ: ಸಿಲಿಂಡರ್ ಅಭಾವದಿಂದ ಆಹಾರ ಉತ್ಸವ ಮುಂದೂಡಿಕೆ!

ಪುತ್ತೂರು: ರಾಜ್ಯಾದ್ಯಂತ ತಲೆದೋರಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್ ಕೊರತೆಯು ಇದೀಗ ಸಾಂಸ್ಕೃತಿಕ ಮತ್ತು ಆಹಾರ ಕಾರ್ಯಕ್ರಮಗಳ ಮೇಲೆ ತನ್ನ ಪ್ರಭಾವ ಬೀರಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ದರ್ಬೆಯಲ್ಲಿ ನಡೆಯಬೇಕಿದ್ದ ಅತ್ಯಂತ ಜನಪ್ರಿಯ ‘ಪುತ್ತೂರು ಫುಡ್ ಫೆಸ್ಟ್’ ಅನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಮಾರ್ಚ್ 13, 14 ಮತ್ತು 15ರಂದು ಮೂರು ದಿನಗಳ ಕಾಲ ದರ್ಬೆಯಲ್ಲಿ ಅದ್ಧೂರಿ ಆಹಾರ ಮೇಳ ಆಯೋಜಿಸಲಾಗಿತ್ತು. ವಾಣಿಜ್ಯ ಸಿಲಿಂಡರ್‌ಗಳ ತೀವ್ರ ಅಭಾವ ಎದುರಾಗಿರುವುದರಿಂದ ಮಳಿಗೆದಾರರಿಗೆ ಅಡುಗೆ ತಯಾರಿಸಲು ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಮತ್ತು ಮಳಿಗೆದಾರರಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Advertisement

ಇದನ್ನೂ ಓದಿ: ಬೆಂಗಳೂರು: ರಿಯಲ್ ಎಸ್ಟೇಟ್ ಏಜೆಂಟ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮೃತನ ಸಂಬಂಧಿಯೇ ಹಂತಕ!

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಆಯೋಜಕರು, ಸದ್ಯಕ್ಕೆ ಫುಡ್ ಫೆಸ್ಟ್ ಮುಂದೂಡಲಾಗಿದ್ದು, ಪರಿಸ್ಥಿತಿ ಸುಧಾರಿಸಿದ ನಂತರ ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದ್ದಾರೆ.ಈ ದಿಢೀರ್ ಬೆಳವಣಿಗೆಯಿಂದಾಗಿ ಕರಾವಳಿಯ ವಿವಿಧ ಖಾದ್ಯಗಳನ್ನು ಸವಿಯಲು ಸಜ್ಜಾಗಿದ್ದ ಆಹಾರ ಪ್ರೇಮಿಗಳಿಗೆ ತೀವ್ರ ನಿರಾಸೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು