Breaking News

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ. ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕನಸಿನ ಯೋಜನೆಯಾದ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಬೃಹತ್ ಮೈಲಿಗಲ್ಲು ಸಿಕ್ಕಿದೆ. ಕಾಲೇಜು ನಿರ್ಮಾಣಕ್ಕೆ ಸಂಬಂಧಿಸಿದಂತೆ ಒಟ್ಟು ರೂ. 574.79 ಕೋಟಿ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ ದೊರೆಯಲಿದೆ.

ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಅನುದಾನಕ್ಕೆ ಅಧಿಕೃತ ಆಡಳಿತಾತ್ಮಕ ಅನುಮೋದನೆ ನೀಡಲಿದ್ದು, ಇದರಿಂದ ಮೆಡಿಕಲ್ ಕಾಲೇಜು ನಿರ್ಮಾಣ ಪ್ರಕ್ರಿಯೆಯು ಮತ್ತಷ್ಟು ಚುರುಕುಗೊಳ್ಳಲಿದೆ. ಆಡಳಿತಾತ್ಮಕ ಅನುಮೋದನೆ ಕೋರಿ ಶಾಸಕ ಅಶೋಕ್ ಕುಮಾರ್ ರೈ ಅವರು ಕಳೆದ ವಾರಷ್ಟೇ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಮಳೆಗಾಲದಲ್ಲಿ ಕಾಡುತ್ತಿದೆಯೇ ವಸಡಿನ ರಕ್ತಸ್ರಾವ, ಬಾಯಿ ದುರ್ವಾಸನೆ?: ಕಾರಣ ನಿಮ್ಮ ಈ ಹವ್ಯಾಸಗಳೇ ಇರಬಹುದು

ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ತಂದೇ ತರುತ್ತೇನೆ ಎಂಬುದು ಶಾಸಕ ಅಶೋಕ್ ರೈ ಅವರ ಪ್ರಮುಖ ಚುನಾವಣಾ ಭರವಸೆಯಾಗಿತ್ತು. ಕಳೆದ ಬಜೆಟ್‌ ಅಧಿವೇಶನದಲ್ಲಿ ಕಾಲೇಜು ಘೋಷಣೆಯಾಗಿದ್ದು, ಇದೀಗ ಅನುದಾನಕ್ಕೂ ಆಡಳಿತಾತ್ಮಕ ಅನುಮೋದನೆ ಸಿಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನರ ಬಹುವರ್ಷಗಳ ಕನಸು ನನಸಾಗುತ್ತಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *