ಪುತ್ತೂರು: ಕೋಡಿಂಬಾಡಿ ಬಳಿ ತೆಂಗಿನಕಾಯಿ ಸಾಗಿಸುತ್ತಿದ್ದ ಪಿಕಪ್ ಪಲ್ಟಿ; ಚಾಲಕ ದಾರುಣ ಸಾವು

ಪುತ್ತೂರು: ತಂಗಿನಕಾಯಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ವಾಹನದ ಚಾಲಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಪುತ್ತೂರಿನ ಕೋಡಿಂಬಾಡಿ ಅರ್ಭಿ ಸಮೀಪ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ಚಾಲಕನನ್ನು ಪುತ್ತೂರಿನ ಬನ್ನೂರಿನ ಚೆಲುವಮ್ಮನಕಟ್ಟೆ ನಿವಾಸಿ ಶಿವಪ್ರಸಾದ್ ನಾಯಕ್ ಎಂದು ಗುರುತಿಸಲಾಗಿದೆ.

ತೆಂಗಿನಕಾಯಿ ಲೋಡ್ ಮಾಡಿಕೊಂಡು ಅರ್ಭಿ ಬಳಿ ಏರು ಮಾರ್ಗ ಏರಿ ತಿರುಗಿಸುವಾಗ ಚಕ್ರವೊಂದು ದಿಡ್ಡು ಮೇಲೇರಿದಾಗ ಹೆದರಿದ ಶಿವಪ್ರಸಾದ್ ಪಿಕಪ್ ನಿಂದ ಇಳಿಯಲು ಮುಂದಾಗಿದ್ದಾರೆ. ಈ ವೇಳೆ ಪಿಕಪ್ ಅವರ ಮೇಲೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ‌ ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.