ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸರಕಾರಿ ಇಲಾಖೆಗಳ ಅರಿವು ಕಾರ್ಯಾಗಾರ

Puttur news Awareness workshop on government departments at Sri Ramakrishna High School Bolwar

ಪುತ್ತೂರು: ವಿದ್ಯಾರ್ಥಿಗಳಿಗೆ ಸರಕಾರಿ ಇಲಾಖೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಸರಕಾರಿ ಇಲಾಖೆಗಳ ಅರಿವು ಕಾರ್ಯಾಗಾರದ ಅಡಿಯಲ್ಲಿ ಜ.17 ರಂದು ಬೊಳುವಾರಿನಲ್ಲಿರುವ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಪೊಲೀಸ್‌ ಇಲಾಖೆಯ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮವನ್ನು ಪುತ್ತೂರು ನಗರ ಪೊಲೀಸ್‌ ಠಾಣೆಯ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ ಸೇಸಮ್ಮ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಲಾಖೆಯ ವಿವಿಧ ಹುದ್ದೆಗಳು, ಆ ಹುದ್ದೆಯ ಕೆಲಸಗಳು ಇತ್ಯಾದಿ ವಿಷಯಗಳ ಬಗ್ಗೆ ತಿಳಿಸಿಕೊಟ್ಟರು.

Advertisement

ಇದನ್ನೂ ಓದಿ: ಮಕ್ಕಳ ಕಲಿಕೆಯನ್ನು ಸಂಭ್ರಮವಾಗಿ ರೂಪಿಸುವ ಶಿಕ್ಷಣೋತ್ಸವೇ ಕಲಿಕಾ ಹಬ್ಬ

ಕಾರ್ಯಕ್ರಮಕ್ಕೆ ಆಗಮಿಸಿದ ಮತ್ತೊಬ್ಬ ಸಂಪನ್ಮೂಲ ವ್ಯಕ್ತಿ ಸಬ್‌ ಇನ್‌ಸ್ಪೆಕ್ಟರ್‌ ಜನಾರ್ದನ ಅವರು, ವಿದ್ಯಾರ್ಥಿಗಳಿಗೆ ಟ್ರಾಫಿಕ್‌ ನಿಯಮಗಳು ಮತ್ತು ಸೈಬರ್‌ ಕ್ರೈಂ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪೋಲಿಸ್ ಹೆಡ್ ಕಾನ್‌ಸ್ಟೇಬಲ್‌ ವಿನೋದ್ ಉಪಸ್ಥಿತರಿದ್ದರು.

Advertisement

ವೇದಿಕೆಯಲ್ಲಿ ಉಪಸ್ಥಿತರಿದ್ದ ಶಾಲಾ ಮುಖ್ಯಗುರು ಗಾಯತ್ರಿ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಈ ಕಾರ್ಯಕ್ರವನ್ನು ಸಂಧ್ಯಾ ಕೆ ನಿರೂಪಿಸಿ, ಶಿಕ್ಷಕಿ ಹರ್ಷಿಣಿ ವಂದಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು