Breaking News

ಪುತ್ತೂರಿನ ಹಿಂದೂ ಮುಖಂಡ ಅಜಿತ್‌ ರೈಗೆ ಗಡಿಪಾರು ನೋಟಿಸ್!

Puttur News Deportation notice issued to Puttur Hindu leader Ajit Rai!

ಪುತ್ತೂರು: ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.

ಪುತ್ತೂರು ತಾಲೂಕು ಒಳಮೊಗ್ರು ಗ್ರಾಮದ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55ರಡಿ, ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

Advertisement

ಈ ಪ್ರಸ್ತಾವನೆಗೆ ಸಂಬಂಧಿಸಿದ ವಿಚಾರಣೆ ಫೆಬ್ರವರಿ 25ರಂದು, ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಈ ವಿಚಾರಣೆಗೆ ಅಜಿತ್ ರೈ ಅವರು ಸ್ವತಃ ಅಥವಾ ತಮ್ಮ ನ್ಯಾಯವಾದಿಯ ಮೂಲಕ ಹಾಜರಾಗಿ ವಾದ ಮಂಡಿಸಬಹುದಾಗಿದೆ ಎಂದು ನೋಟಿಸ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: ಮಂಗಳೂರು: ಅನ್ಯಕೋಮಿನ ಯುವಕ ಮೊಹಮ್ಮದ್ ಮಿದ್ಲಾಜ್ ಜತೆಗೆ ಹಿಂದೂ ಯುವತಿ ಪರಾರಿ

ನಿಗದಿತ ದಿನಾಂಕಕ್ಕೆ ವಿಚಾರಣೆಗೆ ಹಾಜರಾಗದಿದ್ದಲ್ಲಿ, ಈ ಪ್ರಕರಣದಲ್ಲಿ ಆಸಕ್ತಿ ಇಲ್ಲ ಎಂದು ಪರಿಗಣಿಸಿ, ಲಭ್ಯವಿರುವ ದಾಖಲೆಗಳು ಮತ್ತು ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬೆಳವಣಿಗೆ ಪುತ್ತೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಮತ್ತು ಸಂಘಟನೆ ವಲಯಗಳಲ್ಲಿ ಚರ್ಚೆಗೆ ಕಾರಣವಾಗಿದೆ. ವಿಚಾರಣೆಯ ಬಳಿಕ ಗಡಿಪಾರು ಆದೇಶದ ಬಗ್ಗೆ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು