ಪುತ್ತೂರು: ತನ್ನ ಮಗಳು ಎಂದು ನೋಡದೆ ತಂದೆಯೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ.
ತನ್ನ 15 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಅದರಂತೆ, ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಬಶೀರ್ (40) ಎಂಬಾತನನ್ನು ಬಂಧಿಸಿದ್ದಾರೆ. ಅಲ್ಲದೆ, ನ್ಯಾಯಾಲಯಕ್ಕೂ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಪುಟ್ಟ ಮಗುವನ್ನು ಸೊಂಟಕ್ಕೆ ಕಟ್ಟಿ ಮಹಿಳೆ ಆತ್ಮಹತ್ಯೆ!
ಸದ್ಯ, ಸಂತ್ರಸ್ತ ಬಾಲಕಿಯನ್ನು ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇತ್ತ ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದವರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಪುತ್ತೂರಿನಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

