ಪುತ್ತೂರು: ಕೋಡಿಂಬಾಡಿ ಮಠoತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಾಳೆ (ಫೆ.13) ರಾತ್ರಿ 7.ಗಂಟೆಯಿಂದ ಸಹಸ್ರ ಕುಂಕುಮಾರ್ಚನೆ ಸೇವೆಯು ನಡೆಯಲಿದೆ.
ಕ್ಷೇತ್ರದಲ್ಲಿ ಸರ್ವರ ಶ್ರೇಯೋಭಿವೃದ್ಧಿಗಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಕ್ಷೇತ್ರದ ತಂತ್ರಿಗಳಾದ ಕೆಮ್ಮಿoಜೆ ಬ್ರಹ್ಮಶ್ರೀ ನಾಗೇಶ ತಂತ್ರಿಯವರ ಮಾರ್ಗದರ್ಶನದಲ್ಲಿ ಸಹಸ್ರ ಕುಂಕುಮಾರ್ಚನೆ ಸೇವೆ ನಡೆಯಲಿದೆ. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರುಗಲಿದೆ.

ಇದನ್ನೂ ಓದಿ: ಮಂಚಿ ಮಾಡ- ಅರಸು ಕುರಿಯಾಡಿದಾರ್ ಮೂವರು ದೈವಂಗಳ ನೇಮೋತ್ಸವ
ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಭಕ್ತಾದಿಗಳು ದೇವರ ಪ್ರಸಾದ ಸ್ವೀಕರಿಸಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

