ಪುತ್ತೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಹಾಗೂ ಸ್ವಂತ ನಿವೇಶನ ಇಲ್ಲದ ಅರ್ಹ ಫಲಾನುಭವಿಗಳು ಮುಂದಿನ 20 ದಿನಗಳೊಳಗೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಬೇಕು. ನಿಗದಿತ ಗಡುವಿನ ಬಳಿಕ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.
ಈಗಾಗಲೇ ನಿವೇಶನ ಕೋರಿ 2,500ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ನಿವೇಶನ ಹಂಚಿಕೆಗಾಗಿ ಜಾಗಗಳನ್ನು ಗುರುತಿಸುವ ಕಾರ್ಯವೂ ನಡೆದಿದ್ದು, ಮುಂದಿನ 20 ದಿನಗಳೊಳಗೆ ಸ್ವೀಕೃತವಾಗುವ ಅರ್ಜಿಗಳನ್ನು ಮಾತ್ರ ಪರಿಗಣಿಸಿ ಫಲಾನುಭವಿಗಳ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೆಲ್, ಅಡುಗೆ ಅನಿಲದ ಬೆಲೆ ಏರಿಕೆ ಮಾಡಿದ ಕೇಂದ್ರ ಸರಕಾರ ಬಡವನ ಹೊಟ್ಟೆಗೆ ತುಳಿಯುವ ಕೆಲಸ ಮಾಡಿದೆ: ಶಾಸಕ ಅಶೋಕ್ ರೈ
ಪುತ್ತೂರು ವಿಧಾನಸಭಾ ಕ್ಷೇತ್ರದ ಮತದಾರರಾಗಿದ್ದು, ಸ್ವಂತ ಮನೆ ಅಥವಾ ನಿವೇಶನ ಇಲ್ಲದವರು ಇನ್ನೂ ಅರ್ಜಿ ಸಲ್ಲಿಸದಿದ್ದರೆ ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬಾಕಿ ಉಳಿದಿರುವ ಅರ್ಹ ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ


