ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

sri-ramakrishna-high-school-school-reopening-celebration

ಪುತ್ತೂರು: 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ತಿಲಕವಿಟ್ಟು ಆತ್ಮೀಯವಾಗಿ ಸ್ವಾಗತಿಸಿ ತರಗತಿ ಕೊಠಡಿಗಳೊಳಗೆ ಕರೆದೊಯ್ಯಲಾಯಿತು.

ಬಳಿಕ ಎಂ. ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ ಸಭಾ ಕಾರ್ಯಕ್ರಮಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಅವರ ನೇತೃತ್ವದ ಎನ್‌ಸಿಸಿ ವಿದ್ಯಾರ್ಥಿಗಳ ಬ್ಯಾಂಡ್‌ಸೆಟ್‌ನೊಂದಿಗೆ ಶಿಕ್ಷಕಿಯರು ಆರತಿ ಬೆಳಗಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು. ವಿದ್ಯಾರ್ಥಿಗಳಿಂದ ನಡೆದ ಸ್ವಾಗತ ನೃತ್ಯ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಪೋಷಕರೊಂದಿಗೆ ವೇದಿಕೆಗೆ ಆಹ್ವಾನಿಸಿ, ಪೋಷಕರು ಹಾಗೂ ಹಿರಿಯರ ಪಾದಸ್ಪರ್ಶ ಮಾಡಿ ಆಶೀರ್ವಾದ ಪಡೆಯುವ ಮೂಲಕ ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಪರಿಚಯಿಸಲಾಯಿತು. ವೇದಿಕೆಯಲ್ಲಿದ್ದ ಗಣ್ಯರು ಜ್ಞಾನದ ಸಂಕೇತವಾದ ಕಿರು ಹೊತ್ತಗೆಯನ್ನು ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.

ಜೂನ್ ಮೊದಲ ವಾರದಲ್ಲಿ ಜನ್ಮದಿನ ಆಚರಿಸಿಕೊಳ್ಳಲಿರುವ ಇಬ್ಬರು ವಿದ್ಯಾರ್ಥಿಗಳನ್ನು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ 28 ವಿದ್ಯಾರ್ಥಿಗಳನ್ನು ಶಾಲು ಹೊದಿಸಿ, ಸಿಹಿ ನೀಡಿ ಅಭಿನಂದಿಸಲಾಯಿತು.

ಇದನ್ನೂ ಓದಿ: ಪುತ್ತೂರಿನಲ್ಲಿ ವಿದ್ಯುತ್‌ ಕಡಿತ: ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆಯ ಎಚ್ಚರಿಕೆ ನೀಡಿದ ಮಾಜಿ ಶಾಸಕ ಮಠಂದೂರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಅವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯು ನಡೆದು ಬಂದ ಯಶಸ್ವಿ ಪಯಣ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪಡೆದಿರುವ ಮಾನ್ಯತೆಗಳ ಕುರಿತು ಮಾಹಿತಿ ನೀಡಿದ ಅವರು, ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳಲು ಶಿಕ್ಷಕರು ನೀಡುತ್ತಿರುವ ಮಾರ್ಗದರ್ಶನವನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ದಂಬೆಕ್ಕಾನ ಸದಾಶಿವ ರೈ, ದಯಾನಂದ ರೈ ಮನವಳಿಕೆಗುತ್ತು, ಜಯಪ್ರಕಾಶ್ ರೈ ನೂಜಿಬೈಲು, ನಿತ್ಯಾನಂದ ಶೆಟ್ಟಿ ನೆಲ್ಯಾಡಿ, ದಯಾನಂದ ರೈ ಕೋರ್ಮಂಡ, ವತ್ಸಲಾ ಪಿ. ಶೆಟ್ಟಿ ಹಾಗೂ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಆನಂದ್ ಬಿ.ಡಿ. ಉಪಸ್ಥಿತರಿದ್ದರು.

ಪ್ರಭಾರ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್. ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಸಹಶಿಕ್ಷಕಿಯರಾದ ತುಳಸಿ ಕೆ. ಹಾಗೂ ಸುಚಿತ್ರಾ ಕೆ.ಬಿ. ವಿದ್ಯಾರ್ಥಿಗಳ ವಿವರಗಳನ್ನು ನಿರೂಪಿಸಿದರು. ಸುಚಿತ್ರಾ ಕೆ.ಬಿ. ವಂದಿಸಿ, ಶಿಕ್ಷಕಿಯರಾದ ಸಂಧ್ಯಾ ಕೆ. ಹಾಗೂ ಹರ್ಷಿಣಿ ಕಾರ್ಯಕ್ರಮ ನಿರೂಪಿಸಿದರು.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು