ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘದ ನೆಹರುನಗರದಲ್ಲಿರುವ ಕಾಲೇಜು ಆವರಣದಲ್ಲಿ ಜ.12 ರಂದು ವಿವೇಕಾನಂದ ಜಯಂತಿ ಕಾರ್ಯಕ್ರಮ ಆಯೊಜಿಸಲಾಗಿದ್ದು, ಜ.13 ರಂದು ಶತ ಜಯಘೋಷ ಪಥ ಸಂಚಲನ ನಡೆಯಲಿದೆ.
ವಿವೇಕಾನಂದ ಜಯಂತಿ ಪ್ರಯುಕ್ತ 12 ರಂದು ಬೆಳಗ್ಗೆ 9:39ರಿಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಆಗಮಿಸಲಿದ್ದಾರೆ.
ಇದನ್ನೂ ಓದಿ : Public Schools : ರಾಜ್ಯಾದ್ಯಂತ 900 ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ

ಪುತ್ತೂರಿನ ರಾಜಬೀದಿಗಳಲ್ಲಿ ಶತ ಜಯಘೋಷ ಪಥ ಸಂಚಲನ ;
ವಂದೇ ಮಾತರಂ ಮತ್ತು ದೇಶಭಕ್ತಿ ಗೀತೆಗಳ ಸಮೂಹಗಾಯನ ಕಾರ್ಯಕ್ರಮ ನಡೆಯಲಿದೆ. ಆರ್ ಎಸ್ ಎಸ್ ಶತಾಬ್ದಿ ಪ್ರಯುಕ್ತ ಸಂಘ ಬೆಳೆದು ಬಂದ ಹಾದಿಯ ಕುರಿತು ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಜ.13 ರಂದು ಬೆಳಗ್ಗೆ 10 ಗಂಟೆಗೆ ಕಲ್ಲಾರೆ ಹಾಗೂ ಬೊಳುವಾರಿನಿಂದ ಏಕಕಾಲದಲ್ಲಿ ಆರಂಭಗೊಂಡು ಪುತ್ತೂರಿನ ರಾಜಬೀದಿಗಳಲ್ಲಿ ಶತ ಜಯಘೋಷ ಪಥ ಸಂಚಲನ ನಡೆಯಲಿದ್ದು, ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ಸಮಾರೋಪಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

