Breaking News

ಪುತ್ತೂರು: ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿದ ಪ್ರಕರಣ: ಖಿನ್ನತೆಗೆ ಒಳಗಾಗಿ ಯುವತಿ ಆತ್ಮಹತ್ಯೆಗೆ ಯತ್ನ

ಪುತ್ತೂರು: ಯುವಕನೊಬ್ಬ ಪ್ರೀತಿಯ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿದ ಪ್ರಕರಣ ಸಂಬಂಧ ಸಂತ್ರಸ್ತೆ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರದಂದು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಪ್ರಕರಣ ಸಂಬಂಧ ಆರೋಪಿಯು ಬಂಧಿಯಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಈ ಬೆಳವಣಿಗೆಯ ನಂತರ ಯುವತಿ ತೀವ್ರ ಖಿನ್ನತೆ, ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಲ್ಲದೆ, ಸುದೀರ್ಘ ಹೋರಾಟದ ನಂತರವೂ ನ್ಯಾಯ ದೊರಕದ ಹಿನ್ನೆಲೆ ಮನನೊಂದು ಸೋಮವಾರ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಹೇಳಲಾಗುತ್ತಿದೆ.

Advertisement

ಇದನ್ನೂ ಓದಿ: ದಾವಣಗೆರೆ: ವೃದ್ಧ ದಂಪತಿ ಲೂಟಿ ಪ್ರಕರಣ; ನಾಲ್ಕು ತಿಂಗಳ ಬಳಿಕ ಕುಖ್ಯಾತ ಗ್ಯಾಂಗ್‌ ಸೆರೆ!

ಸದ್ಯ ಸಂತ್ರಸ್ತೆ ಯುವತಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರಿನ ಬಿಜೆಪಿ‌ ಮುಖಂಡರೊಬ್ಬರ ಪುತ್ರ ತನ್ನ‌‌ ಸಹಪಾಠಿ ಯುವತಿಯನ್ನು ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾಗಿಸಿದ್ದನು. ಬಳಿಕ ಮದುವೆಯಾಗಲು ನಿರಾಕರಿಸಿದ ನಂತರ ಪ್ರಕರಣ ಬೆಳಗಿಕಿಗೆ ಬಂದಿತ್ತು. ರಾಜಕೀಯ ಜಟಪಟಿಗಳಿಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ ಅನೇಕ ಸಂಘಟನೆಗಳು ಯುವತಿಯ ಬೆಂಬಲಕ್ಕೆ ನಿಂತಿದ್ದವು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು