ರಾಹುಲ್ ಗಾಂಧಿಗೆ ಭಾರಿ ಬಿಗ್ ರಿಲೀಫ್: ಅಮಿತ್ ಶಾ ವಿರುದ್ಧದ ಮಾನನಷ್ಟ ಕೇಸ್ ವಜಾ

ಸುಲ್ತಾನ್‌ಪುರ: ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಸುಲ್ತಾನ್‌ಪುರದ ವಿಶೇಷ ಎಂಪಿ-ಎಂಎಲ್‌ಎ ನ್ಯಾಯಾಲಯದಿಂದ ಭಾರಿ ದೊಡ್ಡ ಕಾನೂನು ಗೆಲುವು ಲಭಿಸಿದೆ.

2018ರ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಆಗಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಾಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸುಲ್ತಾನ್‌ಪುರದ ವಿಶೇಷ ಎಂಪಿ-ಎಂಎಲ್‌ಎ ಕೋರ್ಟ್ ಸಂಪೂರ್ಣವಾಗಿ ವಜಾಗೊಳಿಸಿ (Dismissed) ಆದೇಶಿಸಿದೆ.

ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಇಂದು ಸುಲ್ತಾನ್‌ಪುರ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದರು. ಪ್ರಕರಣದ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ದೂರಿನಲ್ಲಿ ಸೂಕ್ತ ಆಧಾರಗಳು ಹಾಗೂ ಸಾಕ್ಷ್ಯಗಳಿಲ್ಲದಿರುವುದನ್ನು ಪುಷ್ಟೀಕರಿಸಿ ಪ್ರಕರಣವನ್ನು ಸಂಪೂರ್ಣವಾಗಿ ರದ್ದುಗೊಳಿಸಿದ್ದಾರೆ ಈ ಮಹತ್ವದ ತೀರ್ಪಿನಿಂದ ಕಳೆದ 8 ವರ್ಷಗಳಿಂದ ರಾಹುಲ್ ಗಾಂಧಿ ಅವರ ಮೇಲಿದ್ದ ಮಾನನಷ್ಟ ಆರೋಪ ಮುಕ್ತವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಸಡಗರ ಮೂಡಿಸಿದೆ.

ಇದನ್ನೂ ಓದಿ: ಪ್ರತಿಭಟನೆ ಕವರೇಜ್ ವೇಳೆ ಗರ್ಭಿಣಿ ಮಹಿಳಾ ಪತ್ರಕರ್ತೆ ಮೇಲೆ ಹಲ್ಲೆ ಆರೋಪ: ಕಾಂಗ್ರೆಸ್ ಸಂಸತ್ ಸದಸ್ಯ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಆಕ್ರೋಶ

ಪ್ರಕರಣದ ಹಿನ್ನೆಲೆ ಏನು?:

2018ರ ಮೇ 8ರಂದು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಸುಲ್ತಾನ್‌ಪುರ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ವಿಜಯ್ ಮಿಶ್ರಾ ಅವರು 2018ರ ಆಗಸ್ಟ್ 4ರಂದು ರಾಹುಲ್ ಗಾಂಧಿ ವಿರುದ್ಧ ಸುಲ್ತಾನ್‌ಪುರ ಕೋರ್ಟ್‌ನಲ್ಲಿ ಈ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ