ತಂದೆಯ ಹಣಕ್ಕಾಗಿ ತಾಯಿಯನ್ನೇ ಕೊಂದ ಅಪ್ರಾಪ್ತ ಮಗಳು!

bihar-saran-gangrape-murder-class10-student

ರಾಂಚಿ: ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮೃತ ತಂದೆಯ ಹಣದಾಸೆಗೆ ಮಗಳು ತನ್ನ ಪ್ರೇಮಿಯೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಹತ್ಯೆ ಮಾಡಿರುವ ಅಮಾನುಷ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಪರ್ವೀನ್ ಎಂದು ಗುರುತಿಸಲಾಗಿದೆ. ಆರಂಭದಲ್ಲಿ ಆಕೆಯ ಮಗಳು, ತಾಯಿ ಸ್ನಾನದ ಮನೆಯಲ್ಲಿ (ಬಾತ್ ರೂಂ) ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ಸಂಬಂಧಿಕರಿಗೆ ತಿಳಿಸಿದ್ದಳು. ಇದನ್ನು ನಂಬಿದ ಹಜಾರಿಬಾಗ್ ಮತ್ತು ಉತ್ತರ ಪ್ರದೇಶದಲ್ಲಿದ್ದ ಸಂಬಂಧಿಕರು ಭಾನುವಾರ ರಾಂಚಿಗೆ ಆಗಮಿಸಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

Advertisement

ಇದನ್ನೂ ಓದಿ: ಲೋಕಾಯುಕ್ತ ದಾಳಿಗೆ ಬೆದರಿ ಪಿಡಿಒ ಆತ್ಮಹತ್ಯೆ; ರೋಣದಲ್ಲಿ ನೇಣಿಗೆ ಶರಣಾದ ಮಕ್ತುಂಹುಸೇನ್ ಕರಡಿಗುಡ್ಡ

ಅಂತ್ಯಕ್ರಿಯೆ ಮುಗಿದ ಎರಡು ದಿನಗಳ ನಂತರ ಪೊಲೀಸ್ ತನಿಖೆಯಲ್ಲಿ ಸತ್ಯಾಂಶ ಹೊರಬಂದಿದೆ. ಮೃತ ಪರ್ವೀನ್ ಅವರ ಪತಿ ಇತ್ತೀಚೆಗಷ್ಟೇ ನಿಧನರಾಗಿದ್ದರು. ಅವರ ಹೆಸರಲ್ಲಿದ್ದ ಹಣ ಮತ್ತು ಆಸ್ತಿಯನ್ನು ಪಡೆಯುವ ಸಲುವಾಗಿ ಅಪ್ರಾಪ್ತ ಬಾಲಕಿ ತನ್ನ ಪ್ರೇಮಿಯ ಜೊತೆ ಸೇರಿ ಈ ಸಂಚು ರೂಪಿಸಿದ್ದಳು. ಸದ್ಯ ಪೊಲೀಸರು ಬಾಲಕಿ ಮತ್ತು ಆಕೆಯ ಪ್ರೇಮಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Advertisement

ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು