Breaking News

ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ, ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಬೆಳಗಾವಿಯ ಸಾವಗಾಂವ್ ಫಾರ್ಮ್‌ ಹೌಸ್‌ನಲ್ಲಿ ಅಪ್ರಾಪ್ತಿಯ ಮೇಲೆ ನಡೆದಿದ್ದ ಅಮಾನವೀಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಇಲ್ಲಿನ ಪೋಕ್ಸೋ ವಿಶೇಷ ನ್ಯಾಯಾಲಯವು ಮರಣದಂಡನೆಗೆ ಸಮನಾದ ಕಠಿಣ ಶಿಕ್ಷೆ ವಿಧಿಸಿದೆ. ಕೇವಲ ಎಂಟು ತಿಂಗಳ ದಾಖಲೆ ಅವಧಿಯಲ್ಲಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು, ಸಮಾಜ ತಲೆತಗ್ಗಿಸುವಂತೆ ಮಾಡಿದ ಈ ಕೃತ್ಯದ ನಾಲ್ವರು ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ಭಾರಿ ಮೊತ್ತದ ದಂಡ ವಿಧಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಕಾನೂನು ವ್ಯವಸ್ಥೆ ಯಶಸ್ವಿಯಾಗಿದೆ.

ಇದನ್ನೂ ಓದಿ: ಸರಸ್ವತಿ ಸೌಹಾರ್ದ ಚುನಾವಣೆ: ಮತದಾನ ಮುಕ್ತಾಯ, ಕೌಂಟಿಂಗ್ ಪ್ರಾರಂಭ

Advertisement

ಪ್ರಕರಣದ ಪ್ರಮುಖ ಆರೋಪಿಗಳಾದ ಸಾಕೀಬ್ ನಿಜಾಮಿ (22) ಮತ್ತು ರವಿ ನಾಯೊಡಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ತಲಾ 8.76 ಲಕ್ಷ ರೂಪಾಯಿಗಳ ಬೃಹತ್ ದಂಡ ವಿಧಿಸಿದೆ. ಇದೇ ಕೃತ್ಯಕ್ಕೆ ಸಾಥ್ ನೀಡಿದ ರೋಹನ್ ಪಾಟೀಲ್ ಮತ್ತು ಅಶುತೋಷ್ ಪಾಟೀಲ್‌ಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 6 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ದಂಡದ ಮೊತ್ತದ ಜೊತೆಗೆ, ಸಂತ್ರಸ್ತೆಯ ಭವಿಷ್ಯದ ದೃಷ್ಟಿಯಿಂದ ಕಾನೂನು ಸೇವಾ ಪ್ರಾಧಿಕಾರದ ಮೂಲಕ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಘಟನೆ ವಿವರ:

2025ರ ಮೇ 10ರಂದು ನಡೆದಿದ್ದ ಈ ಘಟನೆಯಲ್ಲಿ ಆರೋಪಿಗಳು ಸಂತ್ರಸ್ತೆಯನ್ನು ಬೆಳಗಾವಿಯ ಫಾರ್ಮ್‌ ಹೌಸ್‌ಗೆ ಕರೆದೊಯ್ದಿದ್ದರು. ಆಕೆ ಅಪ್ರಾಪ್ತ ಎಂದು ತಿಳಿದಿದ್ದರೂ ಬಲವಂತವಾಗಿ ಬಿಯರ್ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ಅಷ್ಟೇ ಅಲ್ಲದೆ, ಸಂತ್ರಸ್ತೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನೂ ಎಗರಿಸಿ ಪರಾರಿಯಾಗಿದ್ದರು. ಈ ಬಗ್ಗೆ ಪೋಷಕರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ್ದ ಪೊಲೀಸರು ಭದ್ರ ಸಾಕ್ಷ್ಯಗಳನ್ನು ಒದಗಿಸಿದ್ದರು, ಇದರಿಂದಾಗಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲು ಕಾರಣವಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು