ಮಂಗಳೂರು : ಕರಾವಳಿ ಭಾಗದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ದಕ್ಷಿಣ ಕನ್ನಡ ಜಿಲ್ಲೆಗೆ ಅತ್ಯಂತ ಕಠಿಣವಾದ ‘ರೆಡ್ ಅಲರ್ಟ್’ (Red Alert) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ, ಜುಲೈ 2ರ ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ (Darshan H V) ಅವರು ಹೊರಡಿಸಿರುವ ಅಧಿಕೃತ ಆದೇಶದ ಪ್ರಕಾರ, ನಾಳೆ ಜಿಲ್ಲೆಯಾದ್ಯಂತ ಇರುವ ಈ ಕೆಳಗಿನ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಇರಲಿದೆ:

ಎಲ್ಲಾ ಅಂಗನವಾಡಿ ಕೇಂದ್ರಗಳು
ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು
ಎಲ್ಲಾ ಪದವಿ ಪೂರ್ವ (PU) ಕಾಲೇಜುಗಳು (12ನೇ ತರಗತಿಯವರೆಗೆ)
ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ಜಿಲ್ಲಾಧಿಕಾರಿಗಳು ವಿನಂತಿಸಿದ್ದಾರೆ.
ನದಿ, ಬೀಚ್ಗಳಿಂದ ದೂರವಿರಿ: ಪೋಷಕರು ತಮ್ಮ ಮಕ್ಕಳನ್ನು ಯಾವುದೇ ಕಾರಣಕ್ಕೂ ನದಿಗಳು, ತೊರೆಗಳು, ಕೆರೆಗಳು, ತಗ್ಗು ಪ್ರದೇಶಗಳು ಹಾಗೂ ಸಮುದ್ರ ತೀರಕ್ಕೆ ಹೋಗದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ: ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಹವಾಮಾನ ಸುಧಾರಿಸುವವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.
ಅಧಿಕಾರಿಗಳಿಗೆ ಕಡ್ದಾಯ ಕೇಂದ್ರಸ್ಥಾನ: ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ತಮ್ಮ ಪ್ರಧಾನ ಕಚೇರಿಗಳಲ್ಲೇ ಇದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ವಿಪತ್ತು ನಿರ್ವಹಣೆಗೆ ಸದಾ ಸಿದ್ಧರಿರಬೇಕು ಎಂದು ಡಿಸಿ ಆದೇಶಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

