ಎಎಸ್‌ಐ ಐತಪ್ಪ ಅವರ ಮೇಲೆ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಇಂದು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಸಮೀರ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆಹಚ್ಚಲು ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ.
ಆರೋಪಿ ಸಮೀರ್ ಕೇವಲ ಕೊಲೆಯತ್ನ ಮಾತ್ರವಲ್ಲದೆ, ಸಾಮೂಹಿಕ ಅತ್ಯಾಚಾರ ಸೇರಿದಂತೆ ಒಟ್ಟು 14 ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಆರೋಪಿಯು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಶಂಕೆ ಇರುವುದರಿಂದ, ಇಂಟರ್‌ಪೋಲ್ ಮೂಲಕ ಆತನನ್ನು ಬಂಧಿಸಲು ಈ ನೋಟಿಸ್ ಹೊರಡಿಸಲಾಗಿದೆ.

ಇದನ್ನೂ ಓದಿ7 ವರ್ಷಗಳ ಬಳಿಕ ಇರಾನ್ ತೈಲ ಖರೀದಿಸಿದ ಭಾರತ! ಇಲ್ಲಿದೆ ಸಂಪೂರ್ಣ ಮಾಹಿತಿ
ಈತನ ಸುಳಿವು ಸಿಕ್ಕಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಕಮಿಷನರ್ ಮನವಿ ಮಾಡಿದ್ದಾರೆ. ಈ ಹಿಂದೆ ಮತ್ತೊಬ್ಬ ಆರೋಪಿ ಸಫ್ವಾನ್ ಎಂಬಾತನ ಮೇಲೂ ಇದೇ ರೀತಿಯ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ ಜರುಗಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ


