Breaking News

ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ ಸುಪ್ರೀಂ ರಿಲೀಫ್: ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ

ಚಿಕ್ಕಬಳ್ಳಾಪುರ: ಚುನಾವಣಾ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು (ಫೆಬ್ರವರಿ 27, 2026) ತಡೆಯಾಜ್ಞೆ ನೀಡಿದೆ. ಇದರೊಂದಿಗೆ ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನ ಮತ್ತೆ ಸುಭದ್ರವಾಗಿದೆ. ಳೆದ ವಾರ (ಫೆಬ್ರವರಿ 16, 2026) ಕರ್ನಾಟಕ ಹೈಕೋರ್ಟ್, ಸುಬ್ಬಾರೆಡ್ಡಿ ಅವರು 2023ರ ವಿಧಾನಸಭಾ ಚುನಾವಣೆಯ ಅಫಿಡವಿಟ್‌ನಲ್ಲಿ ಕ್ರಿಮಿನಲ್ ಪ್ರಕರಣಗಳ ಮಾಹಿತಿ ಮರೆಮಾಚಿದ್ದಾರೆ ಎಂಬ ಕಾರಣಕ್ಕೆ ಅವರ ಆಯ್ಕೆಯನ್ನು ರದ್ದುಗೊಳಿಸಿತ್ತು. ಬಿಜೆಪಿ ಅಭ್ಯರ್ಥಿ ಮುನಿರಾಜು ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಈ ತೀರ್ಪು ಬಂದಿತ್ತು.

ಹೈಕೋರ್ಟ್ ಆದೇಶದಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್ ನೀಡಿದ್ದ “ಆಯ್ಕೆ ಅಸಿಂಧು” ಆದೇಶಕ್ಕೆ ಸುಪ್ರೀಂ ಕೋರ್ಟ್ ಪೀಠವು ತಡೆಯಾಜ್ಞೆ ನೀಡಿದೆ. ಈ ತಡೆಯಾಜ್ಞೆಯಿಂದಾಗಿ ಸುಬ್ಬಾರೆಡ್ಡಿ ಅವರು ಶಾಸಕರಾಗಿ ಮುಂದುವರಿಯಲು ಕಾನೂನುಬದ್ಧ ಅವಕಾಶ ಸಿಕ್ಕಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬಾಕಿ ಉಳಿಸಿಕೊಂಡಿದ್ದು, ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ.

Advertisement

ಇದನ್ನೂ ಓದಿ: ಕಾಂಗ್ರೆಸ್​ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

ಸುಪ್ರೀಂ ಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆಯೇ ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಇದು ಸತ್ಯಕ್ಕೆ ಸಂದ ಜಯ ಎಂದು ಸುಬ್ಬಾರೆಡ್ಡಿ ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು