ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ಸಲ್ಲಿಕೆಯಾಗಿರುವ ಆಂತರಿಕ ವರದಿಯು ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿರುವ ಈ ವರದಿಯ ಬೆನ್ನಲ್ಲೇ, ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಹೈಕಮಾಂಡ್ ಶಿಸ್ತು ಕ್ರಮದ ಚಾಟಿ ಬೀಸುವ ಸಾಧ್ಯತೆ ದಟ್ಟವಾಗಿದೆ.
ಉಪಚುನಾವಣಾ ಸಮಯದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕೆಲವು ಹೇಳಿಕೆಗಳು ಮತ್ತು ನಡೆಗಳು ಪಕ್ಷಕ್ಕೆ ಮುಳುವಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಈ ವರದಿ ಹೈಕಮಾಂಡ್ ಕೈಸೇರುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ. ಸಸ್ಪೆಂಡ್ ಮಾಡುವ ಮುನ್ಸೂಚನೆ ಅರಿತ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಈಗಾಗಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ಹಸೆಮಣೆ ಏರಬೇಕಿದ್ದ ಯುವ ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ: ಧಾರವಾಡದಲ್ಲಿ ನಡುರಾತ್ರಿ ನಡೆದಿದ್ದೇನು?
ಕೇವಲ ಹೈಕಮಾಂಡ್ ಮಾತ್ರವಲ್ಲದೆ, ಅಲ್ಪಸಂಖ್ಯಾತ ಸಮುದಾಯದ ಇತರ ಶಾಸಕರು ಕೂಡ ಜಮೀರ್ ಅಹ್ಮದ್ ವಿರುದ್ಧ ತಿರುಗಿಬಿದ್ದಿದ್ದಾರೆ. ಮುಂಬರುವ ಸಚಿವ ಸಂಪುಟ ಪುನಾರಚನೆ ವೇಳೆ ಜಮೀರ್ ಅವರ ಸಚಿವ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆಗಳಿದ್ದು, ಅವರನ್ನು ಸಂಪುಟದಿಂದ ಕೈಬಿಡಬೇಕು ಎಂಬ ಒತ್ತಡ ಹೆಚ್ಚಾಗಿದೆ. ಇದೇ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡಲು ಸೂಚನೆ ನೀಡಲಾಗಿದ್ದು, ಕಾಂಗ್ರೆಸ್ ಆಂತರಿಕ ವಲಯದಲ್ಲಿ ತಲ್ಲಣ ಸೃಷ್ಟಿಯಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


