ಮೈಸೂರು: ಸ್ನೇಹಿತನ ಜೊತೆಗೆ ಲಾಡ್ಜ್‌ನಲ್ಲಿ ಇದ್ದ ಆರ್.ಎಫ್.ಒ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಕುಮಾರನ್ ಜ್ಯುವೆಲರ್ಸ್ ಹಿಂಭಾಗದ ಕಾರಿಡಾರ್ ನಲ್ಲಿ ಟಿ.ನರಸೀಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಾಂತರಾಜ್ ಚೌಹಾಣ್ ಶವ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಜೊತೆಗಿದ್ದ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿದೆ.

ಇದನ್ನೂ ಓದಿ: Russia : ರಷ್ಯಾದಿಂದ ತೈಲ ಖರೀದಿಸಿದರೆ ಶೇ.500 ತೆರಿಗೆ : ಟ್ರಂಪ್ ಬೆದರಿಕೆ
ಕಳೆದ 15 ದಿನಗಳ ಹಿಂದೆಯಷ್ಟೇ ಟಿ ನರಸೀಪುರಕ್ಕೆ ವರ್ಗಾವಣೆಯಾಗಿ ಬಂದಿದ್ದ ಕಾಂತರಾಜ್ ಚೌಹಾಣ್ ಸ್ನೇಹಿತ ಮಲ್ಲನಗೌಡ ಪಾಟೀಲ್ ಜೊತೆ ಸೇರಿ ಯುವರಾಜ್ ಗೆಲಾಕ್ಸಿ ಹೋಟೆಲ್ ನಲ್ಲಿ ರೂಮ್ ಬುಕ್ ಮಾಡಿಕೊಂಡಿದ್ದರು ಎನ್ನಲಾಗಿದೆ.
ಈ ಪ್ರಕರಣ ಸಂಬಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿ, ನಾಪತ್ತೆಯಾಗಿರುವ ಸ್ನೇಹಿತನ ಪತ್ತೆಗಾಗಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಪ್ರಾಥಮಿಕ ವಿಚಾರಣೆ ನಡೆಸಿ, ಮರಣೋತ್ತರ ಪರೀಕ್ಷೆಗೆ ದೇಹ ರವಾನಿಸಲಾಗಿದೆ. ಬಿಜಾಪುರದ ಮೂಲದವರಾಗಿದ್ದ ಮೃತರ ತಂದೆ ತಾಯಿ ಆಗಮಿಸಿದ್ದು, ದೂರಿನನ್ವಯ ಕ್ರಮ ಕೈಗೊಳ್ಳಲಾಗುವುದು. ಇನ್ನೆರೆಡು ದಿನಗಳಲಿ ಪಿಎಂ ಮಾಹಿತಿ ಲಭ್ಯವಾಗಲಿದೆ ಅದನ್ನಾಧರಿಸಿ ಕ್ರಮಕ್ಕೆ ಮುಂದಾಗಲಿದ್ದೇವೆ ಎಂದು ಪತ್ರಿಕಾ ಹೇಳಿಕೆ ನೀಡಿರುತ್ತಾರೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

