Breaking News

ತಂದೆಯ ಸಾವಿನ ನೋವಿನ ನಡುವೆಯೂ ತಂಡವನ್ನು ಸೇರಿಕೊಂಡ ರಿಂಕು ಸಿಂಗ್

ಕೊಲ್ಕತ್ತಾ: ಭಾರತ ಕ್ರಿಕೆಟ್ ತಂಡದ ಯುವ ಬ್ಯಾಟರ್ ರಿಂಕು ಸಿಂಗ್ ವಿಶ್ವಕಪ್ ತಂಡದಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ತಂದೆ ಖಾನ್‌ಚಂದ್ ಸಿಂಗ್ ಶುಕ್ರವಾರ ಅಕಾಲಿಕ ಮರಣ ಹೊಂದಿದರು. ಮನೆಗೆ ತೆರಳಿದ ರಿಂಕು‌ಸಿಂಗ್ ತಂದೆಯ ವಿಧಿವಿಧಾನಗಳನ್ನು ಮುಗಿಸಿ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ.

ಶುಕ್ರವಾರ ಮುಂಜಾನೆ ಗ್ರೇಟರ್ ನೋಯ್ಡಾದ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದರು. ಹೀಗಾಗಿ ರಿಂಕು ಸಿಂಗ್ ಶುಕ್ರವಾರವೇ ಅಲಿಗಢಕ್ಕೆ ತೆರಳಿ ತಮ್ಮ ತಂದೆಯ ಅಂತಿಮ ವಿಧಿವಿಧಾನಗಳನ್ನು ಪೂರೈಸಿದ್ದರು.

Advertisement

ಇದನ್ನೂ ಓದಿ: ದುಬೈ ಮೇಲೆ ಇರಾನ್ ಕ್ಷಿಪಣಿ ದಾಳಿ – ಭಾರಿ ಸ್ಫೋಟದ ಬಗ್ಗೆ ವಿಡಿಯೋ ಹಂಚಿಕೊಂಡ ದುಬೈನಲ್ಲಿ ನೆಲೆಸಿರುವ ಬಂಟ್ವಾಳದ ನಿವಾಸಿ

ನಂತರ ಕೊಲ್ಕತ್ತಾಗೆ ಶನಿವಾರ ಆಗಮಿಸಿ ತಂಡವನ್ನು ಸೇರಿಕೊಂಡಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಮಾರ್ಚ್ 1, 2026 ರಂದು ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡವು ಸೆಮಿಫೈನಲ್​ಗೇರಲಿದೆ.

ರಿಂಕು ಸಿಂಗ್ ಅವರ ವೈಯಕ್ತಿಕ ನಷ್ಟದ ಹೊರತಾಗಿಯೂ, ಟೂರ್ನಿಯ ಅಂತಿಮ ಹಂತದಲ್ಲಿ ಅವರ ಫಿನಿಶಿಂಗ್ ಸಾಮರ್ಥ್ಯವು ಭಾರತ ತಂಡಕ್ಕೆ ಬಹಳ ಮುಖ್ಯವಾಗಿದೆ. ಅದರಲ್ಲೂ ಭಾರತ ತಂಡವು ಕೊಲ್ಕತ್ತಾದಲ್ಲಿ ಪಂದ್ಯವಾಡುತ್ತಿರುವುದರಿಂದ ರಿಂಕು ಸಿಂಗ್ ಆಗಮನವು ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು