ದಕ್ಷಿಣ ಕನ್ನಡದಲ್ಲಿ ರಸ್ತೆ ರಕ್ತಪಾತ: ಪ್ರತ್ಯೇಕ ಅಪಘಾತಗಳಲ್ಲಿ ಯುವಕ ಹಾಗೂ ಆಟೋ ಚಾಲಕ ಸಾವು!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಬೆಳ್ತಂಗಡಿಯಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತಗಳು ಎರಡು ಕುಟುಂಬಗಳ ಆಧಾರಸ್ತಂಭಗಳನ್ನು ಕಸಿದುಕೊಂಡಿವೆ. ಮೊದಲು ಘಟನೆ ಬಂಟ್ವಾಳ ತಾಲೂಕಿನ ಸಲೆತ್ತೂರು-ಮಾರ್ನಬೈಲು ಸಂಪರ್ಕ ರಸ್ತೆಯ ಕುಕ್ಕಾಜೆ ಜಂಕ್ಷನ್ ಸಮೀಪ ಈ ಅಪಘಾತ ಸಂಭವಿಸಿದೆ. ಮನೀಷ್ (22), ಇರಾ ಗ್ರಾಮದ ಕುಕ್ಕಾಜೆ ಬೈಲ್ ನಿವಾಸಿ ಅಶೋಕ್ ಎಂಬುವವರ ಪುತ್ರ ಎಂದು ಗುರುತಿಸಲಾಗಿದೆ.

ಮನೀಷ್ ಸಲೆತ್ತೂರಿನಿಂದ ಕುಕ್ಕಾಜೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಎದುರಿನಿಂದ ಬಂದ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮನೀಷ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.ಮನೀಷ್ ಮುಂಚಿಯ ವಿಕಾಸ್ ಶಾಮಿಯಾನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಕುಟುಂಬಕ್ಕೆ ಇವರೊಬ್ಬರೇ ಪುತ್ರನಾಗಿದ್ದು, ಇವರ ಅಕಾಲಿಕ ಮರಣ ಕುಕ್ಕಾಜೆ ಭಾಗದಲ್ಲಿ ಶೋಕದ ಛಾಯೆ ಮೂಡಿಸಿದೆ.

Advertisement

ಇದನ್ನೂ ಓದಿ: ನಾರಿ ಶಕ್ತಿ ವಂದನ್ ಸಮ್ಮೇಳನ: ಮಹಿಳೆಯರ ಧ್ವನಿಗೆ ಸಂಸತ್ತಿನಲ್ಲಿ ಶಕ್ತಿ ತುಂಬುವ ಭರವಸೆ ನೀಡಿದ ಕ್ಯಾ. ಬ್ರಿಜೇಶ್ ಚೌಟ

ಇನ್ನು ಎರಡನೇ ಘಟನೆ, ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪ ಆಟೋ ರಿಕ್ಷಾ ಉರುಳಿ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿದ್ದಾರೆ. ದೇವಪ್ಪ (37), ನವರ ಗ್ರಾಮದ ಹರಡ್ಡೆ ನಿವಾಸಿ ಎಂದು ಗುರುತಿಸಲಾಗಿದೆ. ದೇವಪ್ಪ ಅವರು ಗುರುವಾಯನಕೆರೆಯಿಂದ ಪ್ರಯಾಣಿಕರೊಬ್ಬರನ್ನು ಬಿಟ್ಟು ಅಳದಂಗಡಿ ಕಡೆಗೆ ಮರಳುತ್ತಿದ್ದರು. ಈ ವೇಳೆ ರಸ್ತೆಗೆ ಅಡ್ಡಲಾಗಿ ನಾಯಿಯೊಂದು ಬಂದ ಕಾರಣ, ಅದನ್ನು ತಪ್ಪಿಸಲು ಹೋಗಿ ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ದೇವಪ್ಪ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.

Advertisement

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು