ಸಾಧು ಕೋಕಿಲಾ ಮತ್ತು ಮಂಡ್ಯ ರಮೇಶ್‌ಗೆ ಬಿಗ್ ರಿಲೀಫ್

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟರಿಬ್ಬರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ರಿಲೀಫ್ ನೀಡಿದೆ.

Advertisement

ಇದನ್ನೂ ಓದಿ: T20 Worldcup: ಇಶನ್ ಕಿಶನ್, ಹಾರ್ದಿಕ್ ಪಾಂಡ್ಯ ಅರ್ಧಶತಕ , ಭಾರತಕ್ಕೆ ಎರಡನೇ ಜಯ

2017ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸಾಕ್ಷ್ಯಧಾರ ಕೊರತೆ ಹಿನ್ನೆಲೆ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಆ ಮೂಲಕ ಕನ್ನಡದ ಹಿರಿಯ ನಟರಿಗೆ ಬಿಗ್ ರಿಲೀಫ್ ಸಿಕ್ಕಿದೆ.

Advertisement

ಹಿನ್ನಲೆ:

2017ರಲ್ಲಿ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ಅವರು ಮೈಸೂರಿನ ಪಾರ್ಲರ್ ಒಂದರಲ್ಲಿ ಮಸಾಜ್ ಮಾಡಿಸಿಕೊಂಡಿದ್ದರು. ಈ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಇಬ್ಬರು ನಟರು ತನಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆಂದು ಆರೋಪವನ್ನು ಮಾಡಿ, ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು.

ಆ ಸಮಯದಲ್ಲಿ ಪ್ರಕರಣ ಸಂಬಂಧ ಇಬ್ಬರು ನಟರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. 2019 ರಲ್ಲಿ ಹೈಕೋರ್ಟ್ ಪ್ರಕರಣದ ವಿಚಾರಣೆಗೆ ತಡೆ ನೀಡಿತ್ತು. ಇದೀಗ ಸಾಕ್ಷಾಧಾರಗಳ ಕೊರತೆಯ ಹಿನ್ನೆಲೆ ಪ್ರಕರಣವನ್ನು ರದ್ದು ಮಾಡಲಾಗಿದೆ.

ಎಫ್‌ಐಆರ್‌ನಲ್ಲಿ ಹೆಸರಿಲ್ಲ, ಹಾಗೂ ಆರೋಪಕ್ಕೆ ಸಾಕ್ಷ್ಯಗಳಿಲ್ಲವೆಂದು ಮಂಡ್ಯ ರಮೇಶ್ ಮತ್ತು ಸಾಧು ಕೋಕಿಲ ಪರವಾಗಿ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ವಾದ ಮಂಡಿಸಿದ್ದರು.

ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್‌ ಪೀಠ ಈ ಆದೇಶವನ್ನು ಹೊರಡಿಸಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು