ಸ್ಯಾಂಡಲ್‌ವುಡ್ ‘ನಟ ರಾಕ್ಷಸ’ ಡಾಲಿ ಧನಂಜಯ್ ದಂಪತಿಯಿಂದ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಧನ್ಯತಾ-ಧನಂಜಯ್!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟ, ‘ಡಾಲಿ’ ಎಂದೇ ಖ್ಯಾತರಾಗಿರುವ ಧನಂಜಯ್ ಮತ್ತು ಅವರ ಪತ್ನಿ ಡಾ. ಧನ್ಯತಾ ತಮ್ಮ ಜೀವನದ ಹೊಸ ಮತ್ತು ಅತ್ಯಂತ ಸಂತಸದ ಹಂತಕ್ಕೆ ಕಾಲಿಟ್ಟಿದ್ದಾರೆ. ಈ ದಂಪತಿ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಸಾಮಾಜಿಕ ಜಾಲತಾಣದ ಮೂಲಕ ಈ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಬೇಬಿ ಬಂಪ್ ಫೋಟೋಶೂಟ್‌ನ ಸುಂದರ ಚಿತ್ರಗಳನ್ನು ಹಂಚಿಕೊಂಡಿರುವ ಧನಂಜಯ್ ದಂಪತಿ, “Our universe is expanding” (ನಮ್ಮ ಬ್ರಹ್ಮಾಂಡ ವಿಸ್ತರಿಸುತ್ತಿದೆ) ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಧನ್ಯತಾ ಅವರ ಗರ್ಭಧಾರಣೆಯ ಕುರಿತು ಸುದ್ದಿಗಳು ಹರಿದಾಡುತ್ತಿದ್ದವು, ಆದರೆ ದಂಪತಿ ಈಗಷ್ಟೇ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

Advertisement

ಇದನ್ನೂ ಓದಿ:ವೈರಲ್ ಸುಂದರಿ ಮೊನಾಲಿಸಾಗೆ ಶಾಕ್ ನೀಡಿದ ನಿರ್ದೇಶಕ! ನಟಿಸುತ್ತಿದ್ದ ಮೊದಲ ಸಿನಿಮಾವೇ ರದ್ದು

ನಟ ಧನಂಜಯ್ ಮತ್ತು ಡಾ. ಧನ್ಯತಾ ಅವರು 2025ರ ಫೆಬ್ರವರಿ 16ರಂದು ಮೈಸೂರಿನಲ್ಲಿ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಒಳಗೇ ದಂಪತಿ ಈ ಸಿಹಿ ಸುದ್ದಿ ನೀಡಿರುವುದು ಅಭಿಮಾನಿಗಳಲ್ಲಿ ಮತ್ತು ಚಿತ್ರರಂಗದ ಆಪ್ತರಲ್ಲಿ ಸಕ್ಕತ್ ಖುಷಿ ತಂದಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಮತ್ತು ಸ್ಯಾಂಡಲ್‌ವುಡ್ ತಾರೆಯರು ಈ ಜೋಡಿಗೆ ಅಭಿನಂದನೆಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ.

Advertisement

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು