ಖಾಕಿ ಕಣ್ತಪ್ಪಿಸಿ ಜೈಲಿಗೆ ಸೇರಿದೆಯಾ ಮೊಬೈಲ್? ಕೈದಿಯ ವಿಡಿಯೋ ಕಾಲ್ ದೃಶ್ಯ ವೈರಲ್; ಪರಪ್ಪನ ಅಗ್ರಹಾರದಲ್ಲಿ ಏನಾಗ್ತಿದೆ?

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪ ಉಂಟಾಗಿದ್ದು, ಕೈದಿಯೊಬ್ಬ ತನ್ನ ಪತ್ನಿಯೊಂದಿಗೆ ವಿಡಿಯೋ ಕಾಲ್ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿರುವ ರೌಡಿ ಶೀಟರ್ ಆಟೋ ಕಿರಣ ಎಂಬ ಕೈದಿ, ಜೈಲಿನ ಒಳಗಿನಿಂದಲೇ ತನ್ನ ಪತ್ನಿಯೊಂದಿಗೆ ವಿಡಿಯೋ ಕಾಲ್ ಮೂಲಕ ಮಾತನಾಡಿದ್ದಾನೆ. ತನ ಪತ್ನಿ ಈ ವಿಡಿಯೋ ಕಾಲ್‌ನ ಸ್ಕ್ರೀನ್ ರೆಕಾರ್ಡಿಂಗ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾಳೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ ವ್ಯಕ್ತವಾಗಿದ್ದು, ನಂತರ ಆಕೆ ಆ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾಳೆ.

ಇದನ್ನೂ ಓದಿ: ತಂದೆಯ ಹಣಕ್ಕಾಗಿ ತಾಯಿಯನ್ನೇ ಕೊಂದ ಅಪ್ರಾಪ್ತ ಮಗಳು!

ಕಟ್ಟುನಿಟ್ಟಾದ ಭದ್ರತೆ ಇರುವ ಜೈಲಿನೊಳಗೆ ಮೊಬೈಲ್ ಫೋನ್ ಹೇಗೆ ಪೂರೈಕೆಯಾಯಿತು ಎಂಬುದು ಈಗ ದೊಡ್ಡ ಪ್ರಶ್ನೆಯಾಗಿ ಮೂಡಿದೆ. ಇತ್ತೀಚೆಗಷ್ಟೇ ನಟ ದರ್ಶನ್ ಜೈಲಿನಲ್ಲಿ ಧೂಮಪಾನ ಮಾಡುತ್ತಿದ್ದ ಮತ್ತು ವಿಡಿಯೋ ಕಾಲ್ ಮಾಡುತ್ತಿದ್ದ ಫೋಟೋಗಳು ವೈರಲ್ ಆಗಿದ್ದವು. ಆ ಘಟನೆಯ ನಂತರವೂ ಜೈಲಿನ ನಿಯಮಗಳ ಉಲ್ಲಂಘನೆ ಮುಂದುವರಿದಿರುವುದು ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು