ಅಂತರಾಷ್ಟ್ರೀಯ ವಿದ್ಯಮಾನವೊಂದು ಜಿಲ್ಲೆಯ ಪುಟ್ಟ ಗ್ರಾಮವೊಂದರಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೇರಿಕಾ-ಇಸ್ರೇಲ್ ದಾಳಿಯಲ್ಲಿ ಹತ್ಯೆಯಾದ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ತಾಲೂಕಿನ ಅಲೀಪುರ ಗ್ರಾಮದಲ್ಲಿ ಸ್ವಯಂಪ್ರೇರಿತ ಬಂದ್ ಆಚರಿಸಲಾಗಿದೆ. ಈ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ನಾಂದಿ ಹಾಡಿದೆ. ಅಲೀಪುರವು ಶಿಯಾ ಮುಸ್ಲಿಂ ಸಮುದಾಯದ ಪ್ರಮುಖ ಕೇಂದ್ರಗಳಲ್ಲಿ ಒಂದಾಗಿದೆ. ಖಮೇನಿ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದ ಅಂಗಡಿ ಮುಂಗಟ್ಟುಗಳು, ವ್ಯಾಪಾರ ವಹಿವಾಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಶೋಕ ಆಚರಿಸಲಾಯಿತು.
ಗ್ರಾಮಸ್ಥರು ರಸ್ತೆಗಿಳಿದು ಖಮೇನಿ ಭಾವಚಿತ್ರ ಹಿಡಿದು ಕಣ್ಣೀರಿಟ್ಟಿದ್ದಾರೆ. ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ತಮ್ಮ ನಾಯಕನಿಗೆ ಗೌರವ ಸಲ್ಲಿಸಿದರು. ಗ್ರಾಮಸ್ಥರು ಕಣ್ಣೀರಿಡುತ್ತಿರುವ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಕಟುವಾದ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ಇದನ್ನೂ ಓದಿ: ದತ್ತು ನೀಡಿದ ಹೆತ್ತವಳು ತಾಯಿಯೇ: ಹೆತ್ತ ತಾಯಿಗೆ ಜೀವನಾಂಶ ನೀಡಲು ನಿರಾಕರಿಸಿದ ಮಗನಿಗೆ ಹೈಕೋರ್ಟ್ ಛೀಮಾರಿ!
ಇರಾನ್‌ನ ನಾಯಕನಿಗಾಗಿ ಇಲ್ಲಿನ ಜನರು ಬಂದ್ ಆಚರಿಸುವುದು ಎಷ್ಟು ಸರಿ? ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಭಾರತದ ಆಂತರಿಕ ಸಮಸ್ಯೆಗಳಿಗೆ ಸ್ಪಂದಿಸದವರು, ವಿದೇಶಿ ಸರ್ವಾಧಿಕಾರಿಯ ಸಾವಿಗೆ ಮರುಗುತ್ತಿರುವುದು ದುರಂತ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

