ಶಿವಮೊಗ್ಗ: ಸ್ಪೆಷಲ್ ಕ್ಲಾಸ್ ಬಳಿಕ ಸಹಪಾಠಿಯ ಭೀಕರ ಕೊಲೆ; ಅನ್ಯಕೋಮಿನ ಮೂವರು ವಿದ್ಯಾರ್ಥಿಗಳ ಬಂಧನ!

ಶಿವಮೊಗ್ಗ: ಜಿಲ್ಲೆಯ ಬಿ.ಹೆಚ್. ರಸ್ತೆಯ ಖಾಸಗಿ ಕಾಲೇಜೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ಹೋಗಿ, ವಿದ್ಯಾರ್ಥಿಯೊಬ್ಬನ ಹತ್ಯೆಯಲ್ಲಿ ಅಂತ್ಯವಾಗಿದೆ. ಕಾಲೇಜಿನ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವಿದ್ಯಾರ್ಥಿ ಮತ್ತು ಆರೋಪಿಗಳು ಅದೇ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇವರ ನಡುವೆ ಯಾವುದೋ ಸಣ್ಣ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಮನಸ್ತಾಪವಿತ್ತು ಎನ್ನಲಾಗಿದೆ.

ಫೆಬ್ರವರಿ 23ರ ಸೋಮವಾರ ಸಂಜೆ ಈ ಕೃತ್ಯ ನಡೆದಿದೆ. ಕಾಲೇಜಿನಲ್ಲಿ ನಡೆದ ವಿಶೇಷ ತರಗತಿ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದಾಗ, ಹೊಂಚು ಹಾಕಿದ್ದ ಮೂವರು ವಿದ್ಯಾರ್ಥಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಚಾಕುವಿನಿಂದ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಇರಿದಿದ್ದರಿಂದ ತೀವ್ರ ರಕ್ತಸ್ರಾವವಾಗಿ ವಿದ್ಯಾರ್ಥಿ ಸ್ಥಳದಲ್ಲೇ ಕುಸಿದು ಬಿದ್ದಿದ್ದನು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

Advertisement

ಇದನ್ನೂ ಓದಿ: ಬೆಚ್ಚಿಬೀಳಿಸುವ ಕ್ರೌರ್ಯ: ಲಿವ್-ಇನ್ ಸಂಗಾತಿಯಿಂದ ಯುವತಿಯ ಖಾಸಗಿ ಅಂಗಕ್ಕೆ ಬೆಂಕಿ

ಘಟನೆ ಸಂಭವಿಸುತ್ತಿದ್ದಂತೆಯೇ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಹತ್ಯೆ ಮಾಡಿದ ಆರೋಪದಡಿ ಅನ್ಯಕೋಮಿನ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪೈಕಿ ಇಬ್ಬರು ಅಪ್ರಾಪ್ತರು ಎಂದು ತಿಳಿದುಬಂದಿದೆ. ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Advertisement

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು