ಬೆಳಗಾವಿ: ಸಣ್ಣ ಪುಟ್ಟ ವಿಚಾರಗಳಿಗೆ ದಂಪತಿಗಳ ನಡುವೆ ಜಗಳ ನಡೆಯುವುದು ಸಾಮಾನ್ಯ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಮನೆಯಲ್ಲಿ ಸೀರೆ ಧರಿಸುವ ಬದಲು ನೈಟಿ ಧರಿಸಿದ್ದಾಳೆ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೊಬ್ಬ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನುಷ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ಸಂಭವಿಸಿದೆ. ಪತ್ನಿ ಸದಾ ಸೀರೆ ಧರಿಸಿಯೇ ಇರಬೇಕು ಎಂಬುದು ಪತಿಯ ಹಠವಾಗಿತ್ತು. ಆದರೆ ಮನೆಯ ಕೆಲಸದ ವೇಳೆ ಅನುಕೂಲಕ್ಕಾಗಿ ಪತ್ನಿ ನೈಟಿ ಧರಿಸಿದ್ದರು.ಇದೇ ವಿಚಾರವಾಗಿ ದಂಪತಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಕೋಪಗೊಂಡ ಪತಿ, ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಇದನ್ನೂ ಓದಿ:ರ್ಯಾಪರ್ ಚಂದನ್ ಶೆಟ್ಟಿ ಎರಡನೇ ಮದುವೆ ಫಿಕ್ಸ್? 2027ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಮೈಸೂರು ಹುಡುಗ!
ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದ ಪತ್ನಿಯನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರು ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಯೇ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

