ವಾಷಿಂಗ್ಟನ್ ಡಿಸಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಶ್ವೇತಭವನದ ವಾರ್ಷಿಕ ಪತ್ರಕರ್ತರ ಭೋಜನಕೂಟದಲ್ಲಿ (WHCA Dinner) ಶನಿವಾರ ರಾತ್ರಿ ಗುಂಡಿನ ಸದ್ದು ಕೇಳಿಬಂದಿದ್ದು, ಭಾರಿ ಆತಂಕ ಸೃಷ್ಟಿಯಾಗಿದೆ. ಭಾಷಣಕ್ಕೆ ಸಿದ್ಧರಾಗುತ್ತಿದ್ದ ಟ್ರಂಪ್ ಅವರನ್ನು ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ತಕ್ಷಣವೇ ವೇದಿಕೆಯಿಂದ ಸುರಕ್ಷಿತವಾಗಿ ಹೋಟೆಲ್‌ನಲ್ಲಿದ್ದ ಬಂಕರ್ ಅಥವಾ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.
ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನ ಬಾಲ್‌ರೂಮ್ ಹೊರಗೆ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದಾಗ ಭದ್ರತಾ ಸಿಬ್ಬಂದಿ ಮತ್ತು ಆತನ ನಡುವೆ ಗುಂಡಿನ ಚಕಮಕಿ ನಡೆಯಿತು.

ಗುಂಡಿನ ಸದ್ದು ಕೇಳುತ್ತಿದ್ದಂತೆ ಅಲ್ಲಿದ್ದ ನೂರಾರು ಪತ್ರಕರ್ತರು, ಪ್ರಮುಖ ನಾಯಕರು ಮತ್ತು ಸೆಲೆಬ್ರಿಟಿಗಳು ಪ್ರಾಣಭಯದಿಂದ ಟೇಬಲ್‌ಗಳ ಕೆಳಗೆ ಅಡಗಿಕೊಂಡರು.
ಅಧ್ಯಕ್ಷ ಟ್ರಂಪ್ ಮತ್ತು ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿದ್ದಾರೆ. ಘಟನೆಯಲ್ಲಿ ಒಬ್ಬ ಸೀಕ್ರೆಟ್ ಸರ್ವಿಸ್ ಅಧಿಕಾರಿಗೆ ಗುಂಡೇಟು ತಗುಲಿದ್ದು, ಬುಲೆಟ್ ಪ್ರೂಫ್ ಜಾಕೆಟ್ ಧರಿಸಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಕೊಲಂಬಿಯಾದಲ್ಲಿ ಭೀಕರ ವಿಮಾನ ದುರಂತ: 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ; ಎಲ್ಲರೂ ಸಾವನ್ನಪ್ಪಿರುವ ಭೀತಿ!
ದಾಳಿಕೋರನನ್ನು ಬಂಧಿಸಲಾಗಿದ್ದು, ಈತ ಕ್ಯಾಲಿಫೋರ್ನಿಯಾದ ಕೋಲ್ ಅಲೆನ್ ಎಂದು ಗುರುತಿಸಲಾಗಿದೆ. ಈ ಘಟನೆಯು ಅಮೆರಿಕದ ಉನ್ನತ ನಾಯಕರ ಭದ್ರತಾ ವ್ಯವಸ್ಥೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

