ವಿಜಯಪುರ: ಜಿಲ್ಲೆಗೆ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂದು ಹಿಂದಿನ ಸರ್ಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕೆಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ 800 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ 730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ರಾಣಿ ಚೆನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ. ಈ ಭಾಗದಲ್ಲಿ ಸೈಕ್ಲಿಸ್ಟ್ ಗಳಿಗಾಗಿ ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್‌ನ್ನು ಸ್ಥಾಪಿಸಲಾಗಿದೆ ಎಂದರು.

ವಿಜಯಪುರ ಜಿಲ್ಲೆಯಲ್ಲಿ ₹800 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.
₹82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ₹730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ರಾಣಿ ಚೆನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ. ಈ… pic.twitter.com/dRXrOUmDv2
— Siddaramaiah (@siddaramaiah) January 9, 2026
ಇದನ್ನೂ ಓದಿ: ‘ಮಲಯಾಳಂ ಭಾಷಾ ಮಸೂದೆ 2025’ ನ್ನು ಹಿಂತೆಗೆದುಕೊಳ್ಳಲು ಒತ್ತಾಯಿಸಿದ ಸಿದ್ದರಾಮಯ್ಯ
ವಿಜಯಪುರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಪಾತ್ರ ವಹಿಸಿದೆ. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದೇನೆ. ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ನನ್ನ ಮೇಲಿದೆ. ವಿಜಯಪುರ ಜಿಲ್ಲೆಯಲ್ಲಿ ₹800 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.
ಯತ್ನಾಳ್ ಬೇಡಿಕೆ ಈಡೇರಿಸಲಾಗುವುದು: ಸಿದ್ದರಾಮಯ್ಯ
ಬಸನಗೌಡ ಪಾಟೀಲ್ ಯತ್ನಾಳ್ ಅವರು ಅನೇಕ ಬೇಡಿಕೆಗಳನ್ನು ಇಟ್ಟಿದ್ದು, ಕನಕದಾಸ ವೃತ್ತದಿಂದ ಅಂಬೇಡ್ಕರ್ ಹಾಗೂ ಶಿವಾಜಿ ವೃತ್ತದವರೆಗೆ 160 ಕೋಟಿ ವೆಚ್ಚದ ಮೂರು ಕಿ.ಮೀ. ಮೇಲ್ಸೇತುವೆ ಮಾಡಬೇಕೆಂದು ಮನವಿ ಮಾಡಿದ್ದಾರೆ. ಅದನ್ನು ನೆರವೇರಿಸಲಾಗುವುದು ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

